Advertisement

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

09:18 AM May 10, 2024 | Team Udayavani |

ಅರಂತೋಡು: ಎಂಎಸ್ಸಿ ಕಲಿಯುತ್ತಿದ್ದು, ಪರೀಕ್ಷೆ ಕೊಠಡಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ.

Advertisement

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಪ್ರಥಮ ವರ್ಷದ ಎಂಎಸ್ಸಿ ವಿದ್ಯಾರ್ಥಿನಿ ಮೇ 7 ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ಪ್ರಕರಣದ ದೂರು ದಾಖಲಿಸಿದ್ದರು.

ಆಕೆ ಪುಸ್ತಕ ಮತ್ತು ಮೊಬೈಲ್ ಅನ್ನು ಕಾಲೇಜಿನಲ್ಲಿ ಬಿಟ್ಟು ತೆರಳಿದ್ದರಿಂದ ಬಾರಿ ಕುತೂಹಲ ಉಂಟಾಗಿತ್ತು. ಪೊಲೀಸರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರಕಿರಲಿಲ್ಲ. ಮೇ 9 ರಂದು ಪಾಂಡೇಶ್ವರ ಠಾಣೆಗೆ ವಿದ್ಯಾರ್ಥಿನಿ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಇದ್ದಾಳೆ ಎಂಬ ಮಾಹಿತಿ ದೊರಕಿದ್ದು, ಅಲ್ಲಿಗೆ ತೆರಳಿದ ಪೊಲೀಸರು ಆಕೆಯನ್ನು ಮಂಗಳೂರಿಗೆ ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.

ಎಂಎಸ್ಸಿ ಪರೀಕ್ಷೆಯನ್ನು ಎದುರಿಸುವುದು ಕಷ್ಟವಾಗಿತ್ತು. ಅತಿಯಾದ ಒತ್ತಡದಿಂದಾಗಿ ಸ್ವಲ್ಪ ವಿಶ್ರಾಂತಿ ಪಡೆಯಬೇಕೆಂದು ನಿರ್ಧರಿಸಿ ತೆರಳಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ.

ಕಾಲೇಜಿನಿಂದ ಹೊರಬಂದು ಕಂಕನಾಡಿಯಲ್ಲಿ ಚಿಕ್ಕಮಗಳೂರಿಗೆ ತೆರಳುವ   ಬಸ್ಸನ್ನು ಹತ್ತಿದಳು. ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಫ್ರೀ ಇರುವುದರಿಂದ ನೇರವಾಗಿ ಚಿಕ್ಕಮಗಳೂರಿಗೆ ತೆರಳಿದ್ದು ಅಲ್ಲಿಂದ ಮೈಸೂರಿಗೆ ಹೋಗುವ ಬಸ್ ಹತ್ತಿದ್ದಾಳೆ. ಅಲ್ಲಿಂದ ಮತ್ತೆ ಮಡಿಕೇರಿಗೆ ಬಸ್ಸಿನಲ್ಲಿ ಬಂದು ಬಸ್ ನಿಲ್ದಾಣದಲ್ಲಿ ತಮಿಳು ಮಾತನಾಡುವ ಹುಡುಗಿಯೊಬ್ಬಳು ಪರಿಚಯವಾಗಿದ್ದು ಆಕೆಯ ಜೊತೆಗೆ ಬುಧವಾರ ಸುಳ್ಯಕ್ಕೆ ಬಂದಿದ್ದಾಳೆ.

Advertisement

ಸುಳ್ಯದ ಅರಂತೋಡಿನಲ್ಲಿ ಆಕೆಯ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದರು. ತಮಿಳು ಬಿಟ್ಟರೆ ಕನ್ನಡ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಮೂಲತ: ತಮಿಳುನಾಡಿನವಳಾಗಿದ್ದು, ತಂದೆ-ತಾಯಿ ಮಂಗಳೂರಿನಲ್ಲಿ ನೆಲೆಸಿದ್ದಾರೆ.

ಸುಳ್ಯದಲ್ಲಿ ಹುಡುಗಿಯಿರುವ ಬಗ್ಗೆ ಅವರ ಮನೆಯವರು ಪರಿಚಯದ ಮಂಗಳೂರಿನ ಪೊಲೀಸ್ ಒಬ್ಬರಿಗೆ ತಿಳಿಸಿದರು. ಅದರಂತೆ ಪಾಂಡೇಶ್ವರ್ ಠಾಣೆಯ ಪೊಲೀಸರು ಅರಂತೋರಿಗೆ ತೆರಳಿ ಆಕೆಯನ್ನು ಮಂಗಳೂರಿಗೆ ಕರೆತಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next