ಪ್ರಯಾಗ್ ರಾಜ್: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಂದು ಆಕೆಯ ಶವವನ್ನು ನಿರ್ಮಾಣ ಹಂತದಲ್ಲಿರುವ ತನ್ನ ಮನೆಯ ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು 35 ವರ್ಷದ ಕೇಸರ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಆರೋಪಿಯನ್ನು ಅರವಿಂದ್ ಎಂದು ಗುರುತಿಸಲಾಗಿದೆ.
ಅರವಿಂದ್ ಸುಮಾರು 14 ದಿನಗಳ ಹಿಂದೆ ಕೇಸರ್ ಅವರನ್ನು ಕೊಂದು ಶವವನ್ನು ತನ್ನ ಮನೆಯ ಟ್ಯಾಂಕ್‌ನಲ್ಲಿ ಬಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 30 ರಂದು ಕೇಸರ್ ಕುಟುಂಬವು ಆಕೆ ಕಾಣೆಯಾಗಿದ್ದಾರೆ ಎಂದು ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ
Related Articles
ಮೃತರ ಫೋನ್‌ನ ಕರೆ ವಿವರಗಳ ಆಧಾರದ ಮೇಲೆ ಅರವಿಂದ್ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಬೆಳಕಿಗೆ ಬಂದಿದೆ.
ಇದೇ ವೇಳೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.