Advertisement

ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

11:53 AM Jul 23, 2024 | Team Udayavani |

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುವಾಗ ನದಿಗೆ ಬಿದ್ದು ಮಹಿಳೆ ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ.

Advertisement

ಜಿಲ್ಲೆಯ ಕಳಸ ಪಟ್ಟಣ ಸಮೀಪದ ಗೇರು ತೋಟ ನಿವಾಸಿ ಶಾರದಾ (55) ಮೃತ ಮಹಿಳೆಯಾಗಿದ್ದಾರೆ.

ಜು.16 ರಂದು ಶಾರದಾ ಅವರು ಎನ್.ಆರ್.ಪುರದ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಿಂದ ಬಂದಿದ್ದರು. ಆಸ್ಪತ್ರೆ ಹೋಗುವುದಾಗಿ ಹೇಳಿ ಬಂದಿದ್ದ ಶಾರದಾ ಮತ್ತೆ ಮನೆಗೆ ಹಿಂದಿರುಗಿರಲಿಲ್ಲ. ಕುಟುಂಬಸ್ಥರು ಪೊಲೀಸರಿಗೆ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.

ಮಂಗಳವಾರ ಬೆಳಗ್ಗೆ ಗೇರುತೋಟ ಸಮೀಪದಲ್ಲಿ ಹರಿಯುವ ಭದ್ರಾ ನದಿಯಲ್ಲಿ ಮಹಿಳೆಯ ಶವವನ್ನು ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸರು ಧರ್ಮಸ್ಥಳ ವಿಪತ್ತು ನಿರ್ವಹಣ ತಂಡದವರ ನೆರವಿನಿಂದ ನದಿಯಲ್ಲಿದ್ದ ಶವವನ್ನು ಹೊರ ತೆಗೆದಿದ್ದಾರೆ.

ಮಹಿಳೆ ಕಾಲು‌ಜಾರಿ ನದಿಗೆ ಬಿದ್ದು ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.

Advertisement

ಇದನ್ನೂ ಓದಿ: Union Budget 2024: ಉದ್ಯೋಗ, ಶಿಕ್ಷಣ, ಕೌಶಲ್ಯಾಭಿವೃದ್ದಿಗೆ 1.48 ಲಕ್ಷ ಕೋಟಿ ರೂ. ಮೀಸಲು

Advertisement

Udayavani is now on Telegram. Click here to join our channel and stay updated with the latest news.

Next