Advertisement

ಮಿಚೆಲ್‌ ಸ್ಟಾರ್ಕ್‌ ಭಾರತ ಪ್ರವಾಸಕ್ಕಿಲ್ಲ?

12:30 AM Feb 07, 2019 | |

ಮೆಲ್ಬರ್ನ್: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್‌ ಸರಣಿಯ ಬಳಿಕ ಆಸ್ಟ್ರೇಲಿಯ ಟಿ20 ಹಾಗೂ ಏಕದಿನ ಸರಣಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.

Advertisement

ಅತ್ಯುತ್ತಮ ಫಾರ್ಮ್ನಲ್ಲಿರುವ ಮಿಚೆಲ್‌ ಸ್ಟಾರ್ಕ್‌ ಗಾಯಾಳಾಗಿದ್ದು, ಪೂರ್ತಿ ಫಿಟ್‌ನೆಸ್‌ ಹೊಂದಿಲ್ಲ. ಹೀಗಾಗಿ ಭಾರತ ವಿರುದ್ಧದ ಸರಣಿಯಲ್ಲಿ ಆಡುವುದು ಖಚಿತಗೊಂಡಿಲ್ಲ.ಫೆ. 24ರಿಂದ ಈ ಸರಣಿ ಆರಂಭವಾಗಲಿದ್ದು, ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಸರಣಿಗಾಗಿ ಕ್ರಿಕೆಟ್‌ ಆಸ್ಟ್ರೇಲಿಯ ಗುರುವಾರ ತನ್ನ ತಂಡ ಪ್ರಕಟಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next