Advertisement

ಭಾರತ ಸರಣಿಗೆ ಆಸೀಸ್ ತಂಡ ಪ್ರಕಟ: ಮೊದಲ ಪಂದ್ಯಕ್ಕಿಲ್ಲ ಮಿಚೆಲ್ ಸ್ಟಾರ್ಕ್

04:19 PM Jan 11, 2023 | Team Udayavani |

ಅಡಿಲೇಡ್: ಭಾರತದಲ್ಲಿ ನಡೆಯಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟಿಸಲಾಗಿದೆ. 18 ಜನರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದ್ದು, ಮೊದಲ ಪಂದ್ಯಕ್ಕೆ ವೇಗಿ ಮಿಚೆಲ್ ಸ್ಟಾರ್ಕ್ ಅಲಭ್ಯರಾಗಲಿದ್ದಾರೆ.

Advertisement

ತಂಡದಲ್ಲಿ ನಾಲ್ಕು ಸ್ಪಿನ್ನರ್ ಗಳಿದ್ದು, ಅನ್‌ ಕ್ಯಾಪ್ಡ್ ಆಫ್‌ ಸ್ಪಿನ್ನರ್ ಟಾಡ್ ಮರ್ಫಿ ಅವರಿಗೆ ಮೊದಲು ಬಾರಿಗೆ ಟೆಸ್ಟ್ ತಂಡಕ್ಕೆ ಕರೆಯಲಾಗಿದೆ.

ಫೆಬ್ರವರಿ 9 ರಂದು ನಾಗ್ಪುರದಲ್ಲಿ ಪ್ರಾರಂಭವಾಗುವ ನಾಲ್ಕು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಮಿಚೆಲ್ ಸ್ಟಾರ್ಕ್ ಕಳೆದು ಕೊಳ್ಳಲಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಅವರು ಸರಣಿಯ ನಂತರದ ಪಂದ್ಯಗಳಿಗೆ ತಂಡ ಕೂಡಿಕೊಳ್ಳಲಿದ್ದಾರೆ.

ಭಾರತ ಟೆಸ್ಟ್‌ ಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ ಶೋ, ಸ್ಟೀವ್ ಸ್ಮಿತ್ (ಉ.ನಾ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

Advertisement

Udayavani is now on Telegram. Click here to join our channel and stay updated with the latest news.

Next