Advertisement
ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳೆಸುವ ನಿಟ್ಟಿನಲ್ಲಿ ಆರಂಭಿಸಿದ ಪಿಲಿನಲಿಕೆ ಸ್ಪರ್ಧೆ ಯಶಸ್ವಿಯಾಗಿ 6 ಆವೃತ್ತಿಗಳನ್ನು ಪೂರೈಸಿದ್ದು, ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಅದನ್ನು ಮುಂದುವರೆಸಲು ಅಸಾಧ್ಯವಾಗಿತ್ತು. ಇದೀಗ ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ತಂಡಗಳು ಭಾಗವಹಿಸಲಿದ್ದು ಬಹುಮಾನ ರೂಪದಲ್ಲಿ ಪ್ರಥಮ ರೂ.3,00,000/- ಮತ್ತು ಫಲಕ, ದ್ವಿತೀಯ ರೂ.2,00,000/- ಮತ್ತು ಫಲಕ, ತೃತೀಯ ರೂ.1,00,000/- ಮತ್ತು ಫಲಕ ಹಾಗೂ ವಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಕರಿಹುಲಿ, ಮುಡಿ ಹಾರಿಸುವುದು, ತಾಸೆ, ಬಣ್ಣಗಾರಿಕೆ, ಅತ್ಯುತ್ತಮ ಹುಲಿ ಕುಣಿತಕ್ಕೆ ತಲಾ ರೂ. 50,000/- ನಗದು ಬಹುಮಾನಗಳನ್ನು ನೀಡಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ರೂ.50,000/- ವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುವುದು. ಈ ಬಾರಿಯ ಪಿಲಿನಲಿಕೆ-7ಕ್ಕೆ ಬಾಲಿವುಡ್‌ನ ಖ್ಯಾತ ತಾರೆಯರಾದ ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಹಾಗೂ ಹೆಸರಾಂತ ನಟ,ಇತ್ತೀಚಿನ ಕಾಂತಾರ ಚಲನ ಚಿತ್ರದ ನಿರ್ದೇಶಕ ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ ಹಲವಾರು ನಟ ನಟಿಯರು, ತುಳು ರಂಗಭೂಮಿಯ ಹೆಸರಾಂತ ಕಲಾವಿದರು ತಾರಾ ಮೆರುಗನ್ನು ನೀಡಲಿದ್ದಾರೆ ಎಂದರು.
Related Articles
Advertisement