ಚಿಕ್ಕಮಗಳೂರು: ವಿಜಯಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ದಲಿತ-ಪ್ರಗತಿಪರ ಹಾಗೂ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ನಗರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರತಿಭಟನಾ ನಿರತರು ನಗರದ ಹೃದಯ ಭಾಗದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆ ನಡೆಸುತ್ತಿದ್ದ ಕರವೇ (ಸ್ವಾಭಿಮಾನಿ ಬಣ) ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದ್ದಾರೆ.
ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿವೆ, ವಾಹನ ಸಂಚಾರವೂ ಎಂದಿನಂತೆ ಇದೆ. ಕೆಲ ಅಂಗಡಿ ಗಳು ಬಾಗಿಲು ತೆರೆದಿಲ್ಲ,ಇನ್ನೂ ಕೆಲ ಅಂಗಡಿಗಳು ತೆರೆದಿರುವುದು ಕಂಡು ಬಂದಿದೆ.
ಶಾಂತಿಯುತ ಪ್ರತಿಭಟನೆಗೆ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರು ಅನುಮತಿ ನೀಡಿದ್ದಾರೆ.
ಎಸ್‌ಪಿ ಅಣ್ಣಾ ಮಲೈ ಅವರು ಒತ್ತಾಯ ಪೂರ್ವಕ ಬಂದ್ ಮಾಡಿಸಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಂಗಡಿಗಳನ್ನು ತೆರೆಯಬಹುದು ನಾವು ಭದ್ರತೆ ನೀಡುವುದಾಗಿ ಮಾಲೀಕರಿಗೆ ಅಭಯ ನೀಡಿದ್ದಾರೆ.
ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.