ಕುಣಿಗಲ್: ಎಪಿಎಂಸಿ, ಕೃಷಿ ಭೂ ಸುಧಾರಣೆ ಮಸೂದೆ ತಿದ್ದುಪಡಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್‌ಗೆ ಕುಣಿಗಲ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಕುಣಿಗಲ್ ಪಟ್ಟಣದ ಸೇರಿದಂತೆ ಹುಲಿಯೂರು ದುರ್ಗ, ಎಡೆಯೂರು ಹಾಗೂ ಅಮೃತೂರು ಹೋಬಳಿಗಳಲ್ಲಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ನೀಡಿದರು.
ಇನ್ನೂ ಕೆಲವು ಹೋಟೆಲ್‌ಗಳು ಎಂದಿನಂತೆ ಬಾಗಿಲು ತೆರೆದುಕೊಂಡು ವ್ಯಾಪಾರ ನಡೆಸಿದವು.ಸರ್ಕಾರಿ ಕಚೇರಿಗಳು, ಬ್ಯಾಂಕ್, ಪೆಟ್ರೋಲ್‌ಬಂಕ್, ತರಕಾರಿ, ಹೂ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಖಾಸಗಿ ವಾಹನಗಳು ಹೊರತು ಪಡಿಸಿ, ಸಾರಿಗೆ ಸಂಸ್ಥೆ ಬಸ್‌ಗಳು ಆಟೋ ರಿûಾ ಮತ್ತು ಟ್ಯಾಕ್ಸಿಗಳು ಎಂದಿನಂತೆ ರಸ್ತೆಗಳಿದೆವು, ಇದರಿಂದ ಪ್ರಯಾಣಿಕರಿಗೆ ಬಂದ್‌ನ ಬಿಸಿ ತಟ್ಟಲಿಲ್ಲ. ತಾಲೂಕು ರೈತರ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ ಬಾಗಿಲು ತೆರೆದುಕೊಂಡು ವ್ಯಾಪಾರ ನಡೆಸುತ್ತಿದ್ದ ಅಂಗಡಿ ಮುಂಗಟ್ಟು ಹಾಗೂ ಹೋಟೆಲ್‌ಗಳನ್ನು ಮುಂಚುವಂತೆ ಮನವಿ ಮಾಡಿದರು.
ಬಳಿಕ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ತಾಪಂ ಮಾಜಿ ಅಧ್ಯಕ್ಷ ಎಸ್. ಆರ್.ಚಿಕ್ಕಣ್ಣ ಮಾತನಾಡಿ, ಹಸಿರು ಶಾಲು ಹಾಕಿಕೊಂಡು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಕೃಷಿ, ಭೂಸುಧಾರಣೆ, ಎಪಿಎಂಸಿ ಸೇರಿದಂತೆ ಹಲವು ಕಾಯ್ದೆಗಳನ್ನು ಜಾರಿಗೆ ತಂದು ರೈತರಿಗೆ ಅನ್ಯಾಯ ಮಾಡಲು ಹೊರಟ್ಟಿದ್ದಾರೆ ಎಂದು ದೂರಿದರು.
ಡಾ.ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ, ಬಿಜೆಪಿ ನಾಯಕರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿದ್ದಾರೆ. ದೇಶದ ಸಂವಿಧಾನ ಆಶಯಗಳಿಗೆ ಗೌರವ ಕೊಡದೆ, ಧಕ್ಕೆ ಉಂಟು ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಉದ್ದೇಶಿರುವ ಕಾಯ್ದೆಗಳು ಕೇವಲ ರೈತ ವಿರೋಧಿ ಕಾನೂನುಗಳಲ್ಲ, ಸಾಮಾನ್ಯ ಜನ, ಕಾರ್ಮಿಕ ಹಾಗೂ ದಲಿತ ವಿರೋಧಿ ಕಾನೂನುಗಳಾಗಿವೆ ಇದಕ್ಕೆ ನಮ್ಮಗಳ ಧಿಕ್ಕಾರವಿದೆ, ಯುಪಿಎ ಸರ್ಕಾರ ಡಾ.ಸ್ವಾಮಿನಾಥನ್ ವರದಿ ಜಾರಿಗೆ ತಂದಿಲ್ಲ, ನಾವು ಅಧಿಕಾರಕ್ಕೆ ಬಂದರೆ ಅದನ್ನು ಜಾರಿಗೆ ತರುತ್ತೇವೆ ಎಂದು ಚುನಾವಣಾ ವೇಳೆ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಆದರೆ ಅಧಿಕಾರಕ್ಕೆ ಬಂದು ಆರು ವರ್ಷ ಕಳೆದರೂ ಈವರೆಗೂ ಡಾ.ಸ್ವಾಮಿನಾಥನ್ ವರದಿ ಜಾರಿಗೆ ತಂದಿಲ್ಲ ಎಂದು ಆರೋಪಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ಕರವೇ ಅಧ್ಯಕ್ಷ ಮಂಜುನಾಥ್, ಕನ್ನಡ ಸೇನೆ ಅಧ್ಯಕ್ಷ ಕೋಟೆ ಶ್ರೀನಿವಾಸ್, ಸಿಐಟಿಯು ಕಾರ್ಯದರ್ಶಿ ಅಬ್ದುಲ್‌ವುುನಾಫ್, ಸಾಮಾಜಿಕ ಕಾರ್ಯಕರ್ತರ ಜಿ.ಕೆ.ನಾಗಣ್ಣ, ಅಖೀಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ರಾಜ್ಯಾಧ್ಯಕ್ಷ ನಗುತಾ ರಂಗನಾಥ್,ಕಸಾಪಮಾಜಿಅಧ್ಯಕ್ಷದಿನೇಶ್ ಕುಮಾರ್, ರೈತ ಸಂಘದ ವಿದ್ಯಾರ್ಥಿ ಘಟಕದ ಅಧ್ಯಕ್ಷ ಲಕ್ಷ್ಮಣ್‌ಗೌಡ ಇತರರು ಇದ್ದರು.