Advertisement
ಫರ್ನೇಸ್ ಆಯಿಲ್ ಗಳನ್ನು ಕಳ್ಳತನ ಮಾಡಿ ದಾಸ್ತಾನು ಮಾಡಿರುವುದಾಗಿ ಬಂದ ಖಚಿತ ಮಾಹಿತಿ ಪಡೆದ ಪುತ್ತೂರು ನಗರ ಠಾಣಾ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸರು ಕಡಬ ತಹಶೀಲ್ದಾರ್ ಮತ್ತು ನೆಲ್ಯಾಡಿ ಗಣಿ ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಇವರನ್ನೊಳಗೊಂಡ ತಂಡ ದಾಳಿ ನಡೆಸಿದ್ದಾರೆ.
Related Articles
Advertisement
ಮಂಗಳೂರು- ಬೆಂಗಳೂರು ಮಾರ್ಗವಾಗಿ ಸಾಗುವ ಕೆಲವು ಫರ್ನೆಸ್ ಆಯಿಲ್ ಟ್ಯಾಂಕರ್ ಗಳ ಚಾಲಕರೊಂದಿಗೆ ಹಣಕ್ಕಾಗಿ ಒಪ್ಪಂದ ಮಾಡಿಕೊಂಡು ಟ್ಯಾಂಕರ್ ಗಳನ್ನು ತಮ್ಮ ಸ್ವ ಸ್ಥಳಕ್ಕೆ ಕರೆಯಿಸಿಕೊಂಡು ಅವುಗಳಿಂದ ಸುಮಾರು 50 ರಿಂದ 200 ಲೀಟರ್ ವರೆಗೆ ಆಯಿಲನ್ನು ಕಳ್ಳತನ ಮಾಡಿ ಅವರ ಸ್ಥಳದಲ್ಲಿರುವ ಭೂಗತ ಟ್ಯಾಂಕ್ ಗಳಲ್ಲಿ ಸಂಗ್ರಹಿಸಿ ಹೆಚ್ಚು ಸಂಗ್ರಹಣೆ ಆದ ನಂತರ ಮಾಲಿಕರ ಖಾಲಿ ಟ್ಯಾಂಕರ್ ಗಳಲ್ಲಿ ತುಂಬಿಸಿ ಇತರೇ ಸ್ಥಳಗಳಿಗೆ ಸೂಕ್ತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುವುದು ತಿಳಿದುಬಂದಿದೆ.
ಮಂಗಳೂರು- ಬೆಂಗಳೂರು ಮಾರ್ಗವಾಗಿ ಸಾಗುವ ಫರ್ನೆಸ್ ಆಯಿಲ್ ಟ್ಯಾಂಕರ್ ಗಳ ಚಾಲಕರಿಗೆ ಹಣವನ್ನು ನೀಡಿ ಮಾಲೀಕರ ಗಮನಕ್ಕೆ ತರದೇ ಮಾಲಿಕರಿಗೆ ವಂಚಿಸಿ ನಷ್ಟವನ್ನುಂಟು ಮಾಡಿರುವುದಲ್ಲದೇ, ಕಳ್ಳತನ ಮಾಡಿ ಸಂಗ್ರಹಿಸಿಟ್ಟು ಫರ್ನೇಸ್ ಆಯಿಲನ್ನು ಟ್ಯಾಂಕರ್ ಮೂಲಕ ಚೆನ್ನೈ ಕಡೆಗೆ ಸಾಗಾಟ ಮಾಡುವುದಾಗಿ ಇದನ್ನು ಮುತ್ತು ಪಾಂಡಿ ಮತ್ತು ರಘನಾಥನ್ ಎಂಬಿಬ್ಬರು ನಡೆಸಿರುವುದಾಗಿ ತಿಳಿಸಿದ್ದಾರೆ.
ಬಂಧಿತರಿಂದ ರೂ. 35.21 ಲಕ್ಷ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.