ಐಜ್ವಾಲ್: ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದ್ದು ಮತ ಎಣಿಕೆ ಕೇಂದ್ರದ ಬಳಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಕ್ರೈಸ್ತ ಧರ್ಮೀಯರೇ ಹೆಚ್ಚಾಗಿರುವ ರಾಜ್ಯದಲ್ಲಿ ಜನರು ಭಾನುವಾರದಂದು ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮತ ಎಣಿಕೆ ದಿನಾಂಕವನ್ನು ಮುಂದೂಡಬೇಕು ಎಂದು ಸಂಘಟನೆಗಳು ಕೋರಿದ್ದವು ಅದರಂತೆ ಭಾನುವಾರದ ಮತ ಎಣಿಕೆ ಕಾರ್ಯವನ್ನು ಸೋಮವಾರಕ್ಕೆ ಮುಂದಿಡಿತ್ತು.
ಎಂಎನ್‌ಎಫ್, ಜೆಡ್‌ಪಿಎಂ ಮತ್ತು ಕಾಂಗ್ರೆಸ್ 40 ಸ್ಥಾನಗಳಲ್ಲೂ ಸ್ಪರ್ಧಿಸಿದ್ದರೆ, ಬಿಜೆಪಿ 13 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ನಾಲ್ಕು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್, ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಇದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ: CPY ಬಾವ ಮಹದೇವಯ್ಯ ಕಿಡ್ನಾಪ್ ಅಪಹರಣ… ಪತ್ತೆಯಾದ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು