ಚೆನ್ನೈ : ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ನಿನ್ನೆ ಹೊರ ಬಿದ್ದಿದೆ. ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಡಿಎಂಕೆ ನಾಯಕ ಎಂ.ಕೆ ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ಫೀಕ್ಸ್ ಮಾಡಿದ್ದಾರೆ.
ಇದೇ ಮೇ 7ರಂದು ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪ್ರಮಾಣ ವಚನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ಒಟ್ಟು 234 ಕ್ಷೇತ್ರಗಳಲ್ಲಿ ಡಿಎಂಕೆ 159 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿದೆ.
ಇನ್ನು ಎಐಎಡಿಎಂಕೆ 75 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೆ, ಡಿಎಂಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಇನ್ನು ಸ್ಟಾಲಿನ ಪುತ್ರ ಉದಯಾನಿಧಿ ಸ್ಟಾಲಿನ್ ಸಹ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ.
ಗೆಲುವಿನ ಬಗ್ಗೆ ಟ್ವೀಟ್ ಮಾಡಿರುವ ಸ್ಟಾಲಿನ್ ಅವರು, ತಮಿಳುನಾಡಿನ ಜನರ ತೀರ್ಪಿನಿಂದ ನಿಮ್ಮ ಸೇವೆ ಮಾಡುವ ಸೌಭಾಗ್ಯ ಸಿಕ್ಕಿದೆ. ಇದೇ ವೇಳೆ ಕರುಣಾ ನಿಧಿಯನ್ನು ನೆನೆದು ಗೌರವ ಸಲ್ಲಿಸಿದ್ದಾರೆ.