Advertisement

ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಅಖಂಡ – ಡಿಕೆಶಿ ಭೇಟಿ ; ‍ಘಟನೆಯ ಮಾಹಿತಿ ಪಡೆದ KPCC ಅಧ್ಯಕ್ಷರು

10:33 PM Aug 12, 2020 | Hari Prasad |

ಬೆಂಗಳೂರು: ಇಲ್ಲಿನ ಕೆ.ಜಿ.ಹಳ್ಳಿ ಗಲಭೆ ಘಟನೆಗೆ ಸಂಬಂಧಿಸಿದಂತೆ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ಸಂಜೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು.

Advertisement

ಶ್ರೀನಿವಾಸಮೂರ್ತಿ ಅವರು ಡಿ.ಕೆ.ಶಿ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಕೆ.ಜಿ.ಹಳ್ಳಿ ಗಲಭೆ, ದುಷ್ಕರ್ಮಿಗಳಿಂದ ತಮ್ಮ ನಿವಾಸದ ಮೇಲೆ ನಡೆದ ದಾಳಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ನೀಡಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಘಟನೆಗೆ ಸಂಬಂಧಿಸಿದಂತೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿ ಆಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಧೈರ್ಯ ತುಂಬಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ‌ಕೆ.ಸಿ ವೇಣುಗೋಪಾಲ್ ಅವರು ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕರೆ ಮಾಡಿ ಧೈರ್ಯ ತುಂಬಿದರು ಹಾಗೂ ಘಟನೆಯ ಬಗ್ಗೆ ವಿವರಣೆಯನ್ನು ಪಡೆದಿದ್ದಾರೆ.


ಘಟನಾ ಸ್ಥಳಗಳಿಗೆ ಅಶ್ವತ್ಥನಾರಾಯಣ, ಡಿ.ವಿ.ಎಸ್. ಭೇಟಿ : ಪರಿಶೀಲನೆ
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಗಲಭೆ ಘಟನೆಗಳಿಗೆ ಸಂಬಂಧಿಸಿದಂತೆ ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಘಟನಾ ಪ್ರದೇಶಗಳಿಗೆ ಬುಧವಾರ ಸಂಜೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

Advertisement

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಿಬ್ಬರೂ ಘಟನೆಯಲ್ಲಿ ಸಂತ್ರಸ್ತರಾದವರ ಮನೆಗಳಿಗೆ ಭೇಟಿ‌ ನೀಡಿ ಅವರಿಗೆ ದೈರ್ಯ ತುಂಬಿದರು.

Advertisement

Udayavani is now on Telegram. Click here to join our channel and stay updated with the latest news.

Next