ಮಡಿಕೇರಿ: ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿ ಜಲಾಶಯ ಭರ್ತಿಯಾದ ಹಿನ್ನಲೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹಾರಂಗಿ ಜಲಾಶಯದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ, ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ನಂತರ ನದಿ ಹಾಗೂ ನಾಲೆಗಳಿಗೆ 1,200 ಕ್ಯೂಸೆಕ್ ನೀರು ಬಿಡಲಾಯಿತು.
ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.52 ಅಡಿಗಳು. ಕಳೆದ ವರ್ಷ ಇದೇ ದಿನ 2841.55 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 15.20 ಮಿ.ಮೀ., ಇಂದಿನ ನೀರಿನ ಒಳಹರಿವು 4321 ಕ್ಯುಸೆಕ್, ಕಳೆದ ವರ್ಷ ಇದೇ ದಿನ 387 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 203 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.
ಕೊಡಗು ಜಿಲ್ಲೆಯ ಮಳೆ ವಿವರ: ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 53.01 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 779.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 946.74 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 100.25 ಮಿ.ಮೀ. ಕಳೆದ ವರ್ಷ ಇದೇ ದಿನ 6.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1118.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1392.02 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.87 ಮಿ.ಮೀ. ಕಳೆದ ವರ್ಷ ಇದೇ ದಿನ 1.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 661.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 822.24 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 558.57 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 625.96 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 73.80, ನಾಪೋಕ್ಲು 70.20, ಸಂಪಾಜೆ 148, ಭಾಗಮಂಡಲ 109, ವಿರಾಜಪೇಟೆ ಕಸಬಾ 28, ಹುದಿಕೇರಿ 29, ಶ್ರೀಮಂಗಲ 52.20, ಪೆÇನ್ನಂಪೇಟೆ 12, ಅಮ್ಮತಿ 18, ಬಾಳೆಲೆ 16, ಸೋಮವಾರಪೇಟೆ ಕಸಬಾ 34.80, ಶನಿವಾರಸಂತೆ 18, ಶಾಂತಳ್ಳಿ 72, ಕೊಡ್ಲಿಪೇಟೆ 10.40, ಕುಶಾಲನಗರ 26, ಸುಂಟಿಕೊಪ್ಪ 36.20 ಮಿ.ಮೀ. ಮಳೆಯಾಗಿದೆ.