Advertisement

‌ಸಚಿವ ಸ್ಥಾನ ಸಿಗದ್ದಕ್ಕೆ ಬೇಸರವಿದೆ,ಸಹಿಸಿಕೊಳ್ಳುವೆ: ಅರವಿಂದ ಬೆಲ್ಲದ

01:07 PM Aug 06, 2021 | Team Udayavani |

ಧಾರವಾಡ: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ಥಾನಮಾನ ಸಿಗದೇ ಇರುವುದು ಬೇಸರ ತಂದಿದೆ. ಆದರೂ ಪಕ್ಷದ ಚೌಕಟ್ಟಿನಲ್ಲಿ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ. ಕ್ಷೇತ್ರದ ಜನರ ಸೇವೆ ಮಾಡುವಲ್ಲಿ ಇದ್ಯಾವುದೂ ಅಡೆತಡೆಯಾಗುವುದಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಎಲ್ಲಾ ಸ್ನೇಹಿತರಿಗೂ ಶುಭಾಶಯ ಕೋರುತ್ತೇನೆ. ನನಗೆ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರೂ ಬೀದಿಗಿಳಿದು ಪ್ರತಿಭಟನೆ ನಡೆಸಬಾರದು. ಏನೇ ಬರಲಿ ಎಲ್ಲರೂ ಒಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡೋಣ. ಮತಕ್ಷೇತ್ರವನ್ನು ಕಳೆದ ಎರಡು ಅವಧಿಯಿಂದ ಪ್ರತಿನಿಧಿಸುತ್ತಿದ್ದೇನೆ. ಕ್ಷೇತ್ರದ ಮತದಾರರ ಪ್ರೀತಿ-ವಿಶ್ವಾಸ, ಬೆಂಬಲದಿಂದ ಇಂದು ನನ್ನ ಹೆಸರು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ಪರಿಗಣಿಸಲ್ಪಟ್ಟು, ಮೋದಿ ಅವರ ಗಮನಕ್ಕೂ ಬರುವಂತಾಗಿದೆ. ಇದು ನಿಮ್ಮೆಲ್ಲರ ಆರ್ಶೀವಾದವೇ ಸರಿ ಎಂದಿದ್ದಾರೆ.

ಶಾಸಕನಾಗಿ ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ನನ್ನ ಕ್ಷೇತ್ರದಲ್ಲಿ ಸುಮಾರು 6000 ಪಕ್ಕಾ ಮನೆ ನಿರ್ಮಾಣ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹಕಾರದಿಂದ ಧಾರವಾಡದಲ್ಲಿ ಐಐಟಿ, ಐಐಐಟಿ ಪ್ರಾರಂಭಿಸಿದ್ದು, ಉನ್ನತ ಶಿಕ್ಷಣ ಕೇಂದ್ರ, ಹಲವು ಕಡೆಗಳಲ್ಲಿ ಕಾಂಕ್ರೀಟ್‌ ರಸ್ತೆಗಳ ನಿರ್ಮಾಣ, ಗ್ರಾಮೀಣ ಪ್ರದೇಶದಲ್ಲಿ ಬ್ಯಾರೇಜ್‌ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳನ್ನು ಎಲ್ಲರ ಸಹಕಾರ, ಬೆಂಬಲದಿಂದ ಕಾರ್ಯಗತಗೊಳಿಸಿದ್ದೇನೆ. ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸುವ ಕಾಯಕದ ಜತೆಗೆ ನಾನು ನಂಬಿಕೊಂಡು ಬಂದ ಸಿದ್ಧಾಂತ, ಸ್ವತ್ಛ ಮತ್ತು ಭ್ರಷ್ಟಾಚಾರ ರಹಿತ ರಾಜಕೀಯ ಅನುಷ್ಠಾನಕ್ಕೆ ಬದ್ಧವಿದ್ದೇನೆ. ಇದಲ್ಲದೇ, ಭ್ರಷ್ಟಾಚಾರಿಗಳ ವಿರುದ್ಧ ಈ ಹಿಂದಿನಂತೆಯೇ ಧ್ವನಿ ಎತ್ತುತ್ತೇನೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next