ಬೆಳ್ತಂಗಡಿ: ನಾಲ್ಕು ವರ್ಷಗಳಿಂದ ತಾಲೂಕಿನಲ್ಲಿ ಮಕ್ಕಳ ಸಂಸತ್‌ನಲ್ಲಿ ಅನೇಕ ಬೇಡಿಕೆಗಳು ಬಂದಿದ್ದು ಇದನ್ನು ನಿಭಾಯಿಸಲು ಪ್ರಯತ್ನಿಸಿದ್ದೇನೆ. ಮಕ್ಕಳಿಗೆ ಸಮಸ್ಯೆ ಬಂದಾಗ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ತತ್‌ಕ್ಷಣ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ.
ಅವರು ಬೆಳ್ತಂಗಡಿ ಗುರು ನಾರಾಯಣ ಸಭಾಭವನದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಕಪುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್‌ಬಾಗ್, ವಿಮುಕ್ತಿ ಉಜಿರೆ, ಪಡಿ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಮಕ್ಕಳ ಸಂಸತ್ 2017ರಲ್ಲಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಪುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್‌ಬಾಗ್ ನಿರ್ದೇಶಕಫಾ| ವಿನೋದ್ ಮಸ್ಕರೇನ್ಹಸ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಉಪಾಧ್ಯಕ್ಷ ನೀಲಕಂಠ ಶೆಟ್ಟಿ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಬಸವರಾಜ್ ಕೆ. ಅಯ್ಯಣ್ಣನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಎ.ಎನ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿ’ಸೋಜಾ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿ.ಆರ್. ನರೇಂದ್ರ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸುಭಾಷ್ ಯಾದವ್, ಯಶೋಧರ ಸುವರ್ಣ, ಶೋಭಾ ಡಿ’ಸೋಜಾ ಉಪಸ್ಥಿತರಿದ್ದರು.
ಮಕ್ಕಳ ಕಾನೂನು ವಿಭಾಗದ ಅಧ್ಯಕ್ಷ ಝಾಕಿರ್ ಹುಸೇನ್ ಪ್ರಸ್ತಾವಿಸಿದರು. ಜಿ.ಪಂ. ಶಿಕ್ಷಣ ಹಾಗೂ ಆರೋಗ್ಯ ಸ್ಥಾಯೀ
ಸಮಿತಿ ಮಾಜಿ ಅಧ್ಯಕ್ಷೆ ಸಿ.ಕೆ. ಚಂದ್ರಕಲಾ ಸ್ವಾಗತಿಸಿ, ಗೋಪಾಲಕೃಷ್ಣ ವಂದಿಸಿದರು. ಸುಧಾಮಣಿ ರಮಾನಂದ್ ಕಾರ್ಯಕ್ರಮ ನಿರೂಪಿಸಿದರು.