Advertisement

ಅಪ್ಪ ಮಗ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡ್ತಿದ್ದಾರೆ : ಶಾಸಕ ಯತ್ನಾಳ್ ವಾಗ್ದಾಳಿ

05:06 PM Feb 23, 2021 | Team Udayavani |

ನವದೆಹಲಿ : ರವಿವಾರ ದೆಹಲಿಗೆ ತೆರಳಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಲ್ಲಿಂದಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

Advertisement

ಇಂದು ( ಫೆ.23) ತಮ್ಮ ಫೇಸ್ ಬುಕ್ ನಲ್ಲಿ ದೆಹಲಿ ಪ್ರವಾಸದ ಕಾರಣ ಹೇಳಿಕೊಂಡಿರುವ ಯತ್ನಾಳ್, ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಎಂದು ಹೇಳಿಸಿ ಮತ್ತು ಬರೆಸಿ ರಾಜ್ಯದ ಜನರಲ್ಲಿ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಆತಂಕ ಉಂಟು ಮಾಡುತ್ತಿದ್ದಾರೆ. ಯತ್ನಾಳನಿಗೆ ಮುಖಭಂಗ, ಬೀಗ್ ಶಾಕ್ ‘ಎಚ್ಚರಿಕೆ ಮತ್ತು ಬಾಯಿಗೆ ಬೀಗ ಅಂತ ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಪಕ್ಷದ ಹೈಕಮಾಂಡ್ ಯಾವುದೇ ರೀತಿಯ ತುರ್ತು ಬುಲಾವ್ ಆಗಲಿ ಅಥವಾ ಸಮಯ ಕೊಟ್ಟು ನನ್ನ ವಿಚಾರಣೆಗೆ ಕರೆದಿಲ್ಲ. ನಾನು ಯಾವುದೇ ನಾಯಕರ ಭೇಟಿಗೆ ಸಮಯ ಕೇಳಲಿಲ್ಲ ಎಂದು ಗುಡುಗಿದ್ದಾರೆ.

ವಿಜಯಪುರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶಿಶುನಿಕೇತನ ಶಾಲೆಯ ಸಿ. ಬಿ. ಎಸ್. ಇ.(C B S E) ನೊಂದಣಿ ಕಾರ್ಯ ನಿಮಿತ್ತ ತುರ್ತು ಕಾರ್ಯ ನಿಮಿತ್ತ ನವ ದೆಹಲಿಗೆ ಬಂದಿರುವುದಾಗಿ ಹೇಳಿರುವ ಯತ್ನಾಳ, ‘ನನ್ನ ಹೋರಾಟ ನನ್ನ ಆದರ್ಶ ಗುರು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಹಾಗೂ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಸಂಕಲ್ಪದ, ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ಮುಕ್ತ ಭಾರತದ ಭಾಗವಾಗಿದೆ ಹೊರತು ವಯಕ್ತಿಕ ವ್ಯಕ್ತಿ ವಿರುದ್ಧ ಅಲ್ಲ. ನನ್ನ ಮಾತ್ರು ಪಕ್ಷದ ವಿರುದ್ಧ ಅಲ್ಲವೆ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ :ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಲಿಂಬಾವಳಿ

ನಿನ್ನೆ ( ಫೆ.22) ಕರ್ನಾಟಕ ರಾಜ್ಯದ ಇಬ್ಬರು ಸಚಿವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನನ್ನ ಬಗ್ಗೆ ಮತ್ತು ನಮ್ಮ ಪೂಜ್ಯರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ ಅದಕ್ಕೆ ಸೂಕ್ತ ಉತ್ತರ ಬಂದ ಮೇಲೆ ಕೊಡುತ್ತೆನೆ. ಹಿಂದೂ ಸಮಾಜದಲ್ಲಿಯ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ , ಅಂಜುವುದಿಲ್ಲ, ಬಗ್ಗುವದು ಇಲ್ಲ ಮತ್ತು ಪಲಾಯನ ಇಲ್ಲವೆ ಇಲ್ಲ ಎಂದು ದೆಹಲಿಯಿಂದ ಸಂದೇಶ ರವಾನಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next