Advertisement

Minister ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ

06:22 PM Dec 02, 2023 | Team Udayavani |

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದ್ದು ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಮ್ಮದೇ ಪಕ್ಷದ ಸಚಿವರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ , ನಮಗೂ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ನಾವೆಲ್ಲ ಯಡಿಯೂರಪ್ಪ ಅವರ ಮಕ್ಕಳನ್ನು ಸೋಲಿಸಬೇಕು ಎಂದು ಇದ್ದೇವೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕು ಅನ್ನೋದು ಗುರಿ. ಆದರೆ, ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು. ಅವರೇ ಪಕ್ಷವನ್ನು ಒಡೆಯುವುದಲ್ಲ ಎಂದರು.

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಆದರೆ ನಾನೊಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next