Advertisement

ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ

03:33 PM Jun 25, 2023 | Team Udayavani |

ಚಾಮರಾಜನಗರ: ಯಾವುದೇ ದೇಶವು ಮುಂದುವರಿಯಲು ಶಿಕ್ಷಣ ಮುಖ ಪಾತ್ರ ವಹಿಸುತ್ತದೆ. ಮೌಲ್ಯಯುತ ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

Advertisement

ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಗರದ ಡಾ. ರಾಜ್‌ಕುಮಾರ್‌ ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉನ್ನತ ಮಟ್ಟದಲ್ಲಿ ಬೆಳೆಯಲು ಸಹಕಾರಿ: ಯುವ ಉತ್ಸವವು ಯುವಜನರಿಗೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಹಕಾರಿಯಾಗುತ್ತದೆ. ಯುವ ಜನರು ತಮ್ಮಲಿರುವ ಕಲೆ, ಸಾಹಿತ್ಯ ಪ್ರತಿಭೆಯನ್ನು ಅನಾವರಣಗೊಳಿಸಿ ಮುಖ್ಯವಾಹಿನಿಯಲ್ಲಿ ಬರುವಂತಾಗಬೇಕು. ಈ ನಿಟ್ಟಿನಲ್ಲಿ ಯುವ ಜನರು ಹೆಜ್ಜೆ ಹಾಕಿದಾಗ ಮಾತ್ರ ಜಿಲ್ಲೆಯ ಕೀರ್ತಿಯು ಇನ್ನೂ ಉನ್ನತ ಮಟ್ಟದಲ್ಲಿ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

ಶಿಕ್ಷಣಕ್ಕೆ ತುಂಬಾ ಮಹತ್ವ ನೀಡಲಾಗಿದೆ: ಪ್ರಸ್ತುತ ದಿನಗಳಲ್ಲಿ ಶಿಕ್ಷಣಕ್ಕೆ ತುಂಬಾ ಮಹತ್ವ ನೀಡಲಾಗಿದೆ. ಎಲ್ಲಾ ಹುದ್ದೆಗಳಿಗೂ ಅದರದೇ ಮಹತ್ವವು ಕೂಡ ಹೆಚ್ಚಾಗಿದೆ. ವಿದ್ಯಾರ್ಥಿಗಳು ಇದನ್ನು ಅರ್ಥ ಮಾಡಿಕೊಂಡು ವಿದ್ಯಾಭ್ಯಾಸ ಮಾಡಬೇಕು. ಸ್ಪರ್ಧಾತ್ಮಕ ಪ್ರಪಂಚದಲ್ಲಿ ಗಟ್ಟಿಯಾಗಿ ನಿಲ್ಲಲು ಚೆನ್ನಾಗಿ ಓದಬೇಕು. ಯುವ ಜನರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಶೈಕ್ಷಣಿಕವಾಗಿ ಆರ್ಥಿಕವಾಗಿ ಬೆಳೆದು ದೇಶದ ಬೆಳವಣಿಗೆಯಲ್ಲಿ ಭಾಗಿಯಾಗಿಬೇಕು ಎಂದು ಶಾಸಕರು ತಿಳಿಸಿದರು.

ಯುವಜನತೆಯು ನಾಡಿನ ಬಹು ದೊಡ್ಡ ಶಕ್ತಿ: ಅಧ್ಯಾಪಕ ಸುರೇಶ್‌ ಎನ್‌. ಋಗ್ವೇದಿ ಮಾತನಾಡಿ, ಯುವಜನತೆಯು ನಾಡಿನ ಬಹು ದೊಡ್ಡ ಶಕ್ತಿಯಾಗಿದೆ. ಯುವಜನರು ತಮ್ಮ ಆಸಕ್ತಿಯನ್ನು ದೇಶದ ಅಭಿವೃದ್ಧಿಯಲ್ಲಿ ತೋರಿಸಿದಾಗ ಮಾತ್ರ ದೇಶವು ಮುಂದಿವರಿದ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಲೂ ಸಾಧ್ಯವಾಗುತ್ತದೆ. ಜಿಲ್ಲೆಯು ಜಾನಪದ, ಪವಾಡ ಪುರುಷರಿಂದ ಹೆಸುರುವಾಸಿಯಾಗಿದೆ ಎಂದರು.

Advertisement

ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ಸಂಯೋಜನಾಧಿಕಾರಿ ಡಾ. ಎಂ.ಬಿ. ಮಹೇಶ್‌, ಜನಪದ ಕಲಾವಿದ ಸಿ.ಎಂ. ನರಸಿಂಹಮೂರ್ತಿ, ಬಾಲಕಾರ್ಮಿಕ ಸೊಸೈಟಿ ಯೋಜನಾಧಿಕಾರಿ ಎಂ. ಮಹೇಶ್‌, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ. ಬಂಗಾರು, ಲೆಕ್ಕಾಧಿಕಾರಿ ಸತೀಶ್‌, ಸಹನಾ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಯುವ ಉತ್ಸವ ಒಂದು ಒಳ್ಳೆಯ ವೇದಿಕೆ: ನೆಹರು ಯುವ ಕೇಂದ್ರ ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್‌ ಚವರೆ ಮಾತನಾಡಿ, ದೇಶವು ಸ್ವಾತಂತ್ರ ಬಂದು 75 ವರ್ಷದ ಅಮೃತ ಮಹೋತ್ಸವವನ್ನ ಆಚರಿಸಿ ಮುಂದೆ ಸಾಗುತ್ತಿದೆ. ಭಾರತ ದೇಶವು 29 ವರ್ಷದೊಳಗಿನ ಹೆಚ್ಚು ಯುವಶಕ್ತಿ ಹೊಂದಿರುವ ರಾಷ್ಟ್ರವಾಗಿದೆ. ಜಿಲ್ಲಾ ಮಟ್ಟದ ಯುವ ಉತ್ಸವವು ಜಿಲ್ಲೆಯ ಯುವ ಪ್ರತಿಭೆಗಳಿಗೆ ಒಂದು ಒಳ್ಳೆಯ ವೇದಿಕೆಯಾಗಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next