Advertisement

ಹೈನುಗಾರಿಕೆ ರೈತರ ಬದುಕಿಗೆ ಸಂಜೀವಿನಿ: ಶಾಸಕ

12:49 PM Feb 08, 2021 | Team Udayavani |

ದೇವನಹಳ್ಳಿ: ಹೈನುಗಾರಿಕೆ ರೈತರ ಬದುಕಿಗೆ ಸಂಜೀವಿನಿ. ರೈತರು ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ, ರೈತರು ಲಾಭ ಕಂಡು, ಆರ್ಥಿಕವಾಗಿ ಸದೃಢರಾಗಲಿದ್ದಾರೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

Advertisement

ನಗರದ ಶ್ರೀ ನಗರೇಶ್ವರ ಸ್ವಾಮಿ ಕಲ್ಯಾಣ ಮಂದಿರದಲ್ಲಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪುರಸ್ಕಾರ ಉತ್ತಮ ಕಾರ್ಯ: ರೈತರು ಸರಬರಾಜು ಮಾಡುವ ಹಾಲಿನಿಂದ ಸಹಕಾರ ಸಂಘ ಹೆಚ್ಚು ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಸಹಕಾರ ತತ್ವದಲ್ಲಿ ಹಾಲು ಉತ್ಪಾದಕರ ಸಹಕಾರ  ಸಂಘಗಳು ಉತ್ತಮ ಕಾರ್ಯನಿರ್ವಹಿಸುತ್ತಿದೆ. ಹಾಲು ಉತ್ಪಾದಕ ನೌಕರರ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಉತ್ತಮ ಕಾರ್ಯ. ಮಕ್ಕಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಅಂಕಗಳಿಸಲು ಪೊತ್ಸಾಹಿಸಿದಂತೆ ಆಗುತ್ತಿದೆ. ರೈತರ ಬಾಳು ಹಸನಾಗಲು ಹೆ„ನುಗಾರಿಕೆ ಪಾತ್ರ ಹೆಚ್ಚಿದೆ ಎಂದರು.

ರಾಸುಗಳಿಗೆ ವಿಮೆ ಕಡ್ಡಾಯ: ರೈತರು ತಮ್ಮ ರಾಸುಗಳಿಗೆ ವಿಮೆಯನ್ನು ಕಡ್ಡಾಯವಾಗಿ ಮಾಡಿಸಬೇಕು. 2-3 ಹಸು ಮನೆಗಳಲ್ಲಿ ಕಟ್ಟಿಕೊಂಡರೆ, ಹಾಲಿನಿಂದ ಜೀವನ ಸಾಗಿಸಬಹುದು. ಎಷ್ಟೇ ವಿದ್ಯಾಭ್ಯಾಸ ಮಾಡಿದರೂ ಕಂಪ್ಯೂಟರ್‌ ಯುಗದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದರು.

ಕನಕಪುರ ಬಳಿ ಮೇಗಾ ಡೇರಿ: ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಸ್ವಾಮಿ ಮಾತನಾಡಿ, ಕನಕಪುರ ಬಳಿ 600 ಕೋಟಿ ರೂ. ವೆಚ್ಚದಲ್ಲಿ ಹಾಲು ಉತ್ಪನ್ನಗಳ ಮೆಗಾ ಡೇರಿ ಮಾಡಲಾಗುತ್ತಿದೆ. ವಿವಿಧ ಪದಾರ್ಥಗಳನ್ನು ಮಾಡಲಾಗುತ್ತಿದೆ. ಹಾಲು ಉತ್ಪಾದಕ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

Advertisement

ಇದನ್ನೂ ಓದಿ : ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಸ್ಪರ್ಧೆ: ನಾಮಪತ್ರ ಸಲ್ಲಿಕೆ

ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘ,ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚನ್ನಕೇಶವ ಮಾತನಾಡಿದರು. ಅಧ್ಯಕ್ಷತೆಯನ್ನು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಬಿ.ಶ್ರೀನಿವಾಸ್‌ ವಹಿಸಿ ದ್ದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್‌, ಸದಸ್ಯೆ ಅನಂತಕುಮಾರಿ, ತಾಪಂ ಅಧ್ಯಕ್ಷೆ ಶಶಿಕಲಾ, ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಎ.ಸಿ.ನಾಗರಾಜ್‌,  ನಿರ್ದೇಶಕ ಕೆ.ಲಕ್ಷ್ಮೇಗೌಡ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಎನ್‌.ಸೊಣ್ಣಪ್ಪ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ತಾಲೂಕು ಸೊಸೈಟಿ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಖಾದಿ ಬೋರ್ಡ್‌ ಅಧ್ಯಕ್ಷ ಎಸ್‌.ನಾಗೇಗೌಡ, ದೇವನಹಳ್ಳಿ ಶಿಬಿರ ಕಚೇರಿ ಉಪವ್ಯವಸ್ಥಾಪಕ ಡಾ.ಗಂಗಯ್ಯ, ಸಹಾಯಕ ವ್ಯವಸ್ಥಾಪಕ ಎಂ.ಇ. ಮುನಿರಾಜೇಗೌಡ, ಬೆಮೂಲ್‌ ಉಪವ್ಯವಸ್ಥಾಪಕ ಆರ್‌.ಪ್ರಸನ್ನಕುಮಾರ್‌, ಜಿಲ್ಲಾ  ಹಾಲು ಉತ್ಪಾದಕ ನೌಕರರ ಸಂಘದ ಅಧ್ಯಕ್ಷ ಬಿ.ಎನ್‌.ಲೋಕೇಶ್‌, ತಾಲೂಕು ಪ್ರಧಾನ ಕಾರ್ಯ ದರ್ಶಿ  ಬಿ.ಎನ್‌.ಲೋಕೇಶ್‌, ಖಜಾಂಚಿ ರಮೇಶ್‌, ಸಂಘಟನಾ ಕಾರ್ಯದರ್ಶಿ ಬಿ.ರಾಜಣ್ಣ, ಐ.ಸಿ. ವಿಜಯಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next