ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ರಸ್ತೆಯ ಎರಡು ಬದಿ ವ್ಯವಸ್ಥಿತವಾಗಿ ಚರಂಡಿ ನಿರ್ಮಿಸಿ ಕಾಂಕ್ರಿಟ್ ರಸ್ತೆ ಮಾಡುವ ಮೂಲಕ ಮಳೆ ನೀರು ನಿಲ್ಲದಂತೆ ಕ್ರಮ ವಹಿಸಬೇಕೆಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಕಾಗೇಹಳ್ಳದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿ ನಂತರ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.
ಅಗತ್ಯ ಅನುದಾನ: ಹಲವು ವರ್ಷದಿಂದಲೂ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಂದ ಸಂದರ್ಭದಲ್ಲಿ ನೀರು ನಿಲ್ಲುತ್ತಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರಿಂದಲೂ ದೂರು ವ್ಯಾಪಕವಾಗಿ ಕೇಳಿ ಬಂದ ಹಿನ್ನೆಲೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದ ಇದೀಗ ಚರಂಡಿ ಹಾಗೂ ರಸ್ತೆ ನಿರ್ಮಾಣಕ್ಕೆ ಅನುದಾನ ಹಾಕಲಾಗಿದೆ ಎಂದು ಹೇಳಿದರು.
ಹಲವು ಕಾಮಗಾರಿಗೆ ಚಾಲನೆ: ತಾಲೂಕಿನ ಹಸಗೂಲಿ ಗ್ರಾಮದಲ್ಲಿ ಉಪ್ಪಾರ ಸಮುದಾಯ ಭವನ ಗುದ್ದಲಿ ಪೂಜೆ ಹಾಗೂ ಸಾಮಾನ್ಯ ವರ್ಗದ ಬೀದಿಗಳಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ, ಬೆಟ್ಟಹಳ್ಳಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ, ದೊಡ್ಡ ತುಪ್ಪೂರು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ, ತೆರಕಣಾಂಬಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ, ಉತ್ತೂರು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಸಿ.ಎಸ್.ನಿರಂಜನಕುಮಾರ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಸದಸ್ಯರಾದ ನಾಗೇಶ್, ರಂಗಸ್ವಾಮಿ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಚನ್ನಮಲ್ಲಿಪುರ ಬಸವಣ್ಣ, ಪುರಸಭೆ ಮುಖ್ಯಾಧಿಕಾರಿ ಹೇಮಂತ್ ರಾಜ್, ಪಿಡಬ್ಲ್ಯುಡಿ ಎಇಇ ರಾಮಚಂದ್ರ, ಹಸಗೂಲಿ ಕುಮಾರ್, ಗಂಗಾಧರಪ್ಪ, ಪ್ರಸಾದ್, ಮಹೇಂದ್ರ, ಶಂಕರಪ್ಪ, ಉಮೇಶ್, ಬಸವಣ್ಣ, ವಕೀಲ ಪ್ರಸಾದ್, ಅನಿಲ್, ಬೆಟ್ಟಹಳ್ಳಿ ಮಹೇಶ್, ಗುರು, ಬೆಳ್ಳಪ್ಪ, ಸಿದ್ದಯ್ಯ, ಚೆಲುವ, ಮೂರ್ತಿ, ರಾಜು, ಮಹೇಶ್, ದೊಡ್ಡತುಪ್ಪೂರು ಗ್ರಾಮದ ರಾಜಶೇಖರಪ್ಪ, ರೇಚಪ್ಪ, ರವಿ, ಸಿದ್ದರಾಜು, ನಾಗರಾಜು, ಡೇರಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.