Advertisement

ಚಿಕ್ಕಮಗಳೂರು: ಬಿಜೆಪಿ ರಾಷ್ಟೀಯ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿಯವರ ತಂದೆ ತಿಮ್ಮೇಗೌಡ(92)ವಯೋಸಹಜ ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದ್ದಾರೆ.

Advertisement

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ರವಿವಾರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ತಿಮ್ಮೇಗೌಡ ಅವರು ಪತ್ನಿ ಹೊನ್ನಮ್ಮ, ಪುತ್ರರಾದ ಸಿಟಿ ರವಿ, ಸಿಟಿ ರಘು, ಪುತ್ರಿಯರಾದ ರೇಣುಕಾ, ರೋಹಿಣಿ, ರೇವತಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next