ಮದ್ದೂರು: ಕ್ಷೇತ್ರದ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಕೈಗೊಂಡು ಮಾದರಿ ಕ್ಷೇತ್ರವನ್ನಾಗಿಸಲು ನಿರಂತರವಾಗಿ ಶ್ರಮಿಸುತ್ತೇವೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.
ತಾಲೂಕಿನ ಕೆಸ್ತೂರು ಜಿಪಂ ವ್ಯಾಪ್ತಿಯ ಅಡಗನಹಳ್ಳಿ, ಬ್ಯಾಲದಕೆರೆ, ಕುಂದನಕುಪ್ಪೆ ಹಾಗೂ ಇನ್ನಿತರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತಾಲೂಕಿನಲ್ಲಿ ಕೋಟ್ಯಂತರ ರೂ. ಅನುದಾನವನ್ನು ಬಿಡುಗಡೆಗೊಳಿಸಿ, ಅಭಿವೃದ್ಧಿ ಕಾರ್ಯ ಗಳಿಗೆ ಮುಂದಾಗುತ್ತೇವೆ ಎಂದು ಹೇಳಿದರು.
ಮದ್ದೂರಿಗೆ ಪ್ರಥಮ ಸ್ಥಾನ: ಆತಗೂರು ಹೋಬಳಿ ವ್ಯಾಪ್ತಿಯ ಕೆರೆಗಳ ಪುನಶ್ಚೇತನ, ನೀರು ತುಂಬಿಸುವುದು, ಹೂಳು ತೆಗೆಸುವುದು, ಏತ ನೀರಾವರಿ ಹಾಗೂ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿ ಸ್ಥಳೀಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದು, ತಾಲೂಕಿನ ಪ್ರೌಢಶಾಲಾ ವಿಭಾಗದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಮಾರ್ಗಸೂಚಿ ಪತ್ರಿಕೆ ವಿತರಿಸುವ ಮೂಲಕ ಜಿಲ್ಲೆಯಲ್ಲೇ ಮದ್ದೂರು ತಾಲೂಕು ಪ್ರಥಮ ಸ್ಥಾನದಲ್ಲಿರುವುದಾಗಿ ತಿಳಿಸಿದರು.
ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಿ: ನೂತನವಾಗಿ ಆಯ್ಕೆಯಾಗಿರುವ ಗ್ರಾಪಂ ಸದಸ್ಯರು ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಮಾದರಿ ಗ್ರಾಮವನ್ನಾಗಿಸುವ ಜತೆಗೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿ ಸಬೇಕು ಎಂದರು.
ಇದನ್ನೂ ಓದಿ :ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹ
ತಾಪಂ ಮಾಜಿ ಸದಸ್ಯ ಬಿಳಿಯಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಶಂಕರೇಗೌಡ, ಮುಖಂಡರಾದ ಹೂತಗೆರೆ ದಿಲೀಪ್‌ಕುಮಾರ್, ಚಂದ್ರಶೇಖರ್, ಕುಂದನಕುಪ್ಪೆ ಕುಮಾರ್, ಚಂದನ್, ರವಿ, ಮಲ್ಲಿಕಾರ್ಜುನ, ನಾಗಣ್ಣ, ಗಂಗರಾಜು ಹಾಜರಿದ್ದರು.