ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಮೂರು ವರ್ಷದ ಮಗು ಗೌರಿ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಳಾಗಿದ್ದಾಳೆ.
ಗೌರಿ ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು.
ಗೌರಿ ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ, ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ ಡಿ ಹರೀಶ್ ಗೌಡ ಅವರ ಪುತ್ರಿ.
ಇದನ್ನೂ ಓದಿ:ಮಿಷನ್ 150 ಕಷ್ಟ!; ಬಿಜೆಪಿ ನಿದ್ದೆಗೆಡಿಸಿದ ಆಂತರಿಕ ಸಮೀಕ್ಷೆ?
Related Articles
ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್ ಮತ್ತು ಕುಟುಂಬಕ್ಕೆ ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.