Advertisement
ಚಿಕ್ಕೋಡಿ: ಕೋವಿಡ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೊಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ತಮ್ಮ ಕ್ಷೇತ್ರದ ಜನರನ್ನು ಕೊರೊನಾ ಸಂಕಟದಿಂದ ಪಾರು ಮಾಡಲು ನಿರಂತರ ಪ್ರಯತ್ನದ ಜೊತೆಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ.
Related Articles
Advertisement
ಪುತ್ರನಿಗೆ ತಂದೆ ಸಾಥ್: ಕೊರೊನಾ ವಿರುದ್ಧ ಹೋರಾಟದಲ್ಲಿ ಶಾಸಕ ಗಣೇಶ ಹುಕ್ಕೇರಿಗೆ ತಂದೆ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸಂಪೂರ್ಣ ಸಾಥ್ ನೀಡಿದ್ದಾರೆ. 75ರ ಇಳಿವಯಸ್ಸಿನಲ್ಲಿಯೂ ಕೂಡ ಚಿಕ್ಕೋಡಿ-ಸದಲಗಾ ಕ್ಷೇತ್ರದ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸುತ್ತಿದ್ದಾರೆ.
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕಿನ ವಿವಿಧ ಪ್ರಾಥಮಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿಯ ಸಮಸ್ಯೆ ನಿವಾರಿಸಿ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗಳಿಗೆ ಜನರೇಟರ್ ಸೌಲಭ್ಯ: ಮಳೆ-ಗಾಳಿಗೆ ವಿದ್ಯುತ್ ಸಮಸ್ಯೆ ಆಗಬಾರೆಂದು ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ನಾಲ್ಕು ಆಸ್ಪತ್ರೆಗಳಿಗೆ ಹುಕ್ಕೇರಿ ಕುಟುಂಬ ಅನ್ನಪೂರ್ಣೇಶ್ವರಿ ಫೌಂಡೇಶನ್ ಮೂಲಕ ಹೊಸ ಜನರೇಟರ್ ಒದಗಿಸಿ ವಿದ್ಯುತ್ ಸಮಸ್ಯೆ ನೀಗಿಸಿದ್ದಾರೆ.
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ, ಸದಲಗಾ, ಯಕ್ಸಂಬಾ ಮತ್ತು ಖಡಕಲಾಟ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 16 ಲಕ್ಷ ರೂ. ವೆಚ್ಚದಲ್ಲಿ ಜನರೇಟರ್ ಸೌಲಭ್ಯ ಕಲ್ಪಿಸಿದ್ದಾರೆ.
ಆಸ್ಪತ್ರೆಗಳಿಗೆ ಆಕ್ಸಿಜನ್ ಪೈಪಲೈನ್ ಅಳವಡಿಕೆ: ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿರುವ ಪರಿಣಾಮ ಕೊರೊನಾ ಪೀಡಿತರಿಗೆ ಅನುಕೂಲವಾಗಲು ತಾಲೂಕಿನ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್ ಪೈಪ್‌ಲೈನ್ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಉಚಿತ ಊಟ-ಔಷಧ: ಶಾಸಕ ಗಣೇಶ ಹುಕ್ಕೇರಿ ಮತ್ತು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಕೊರೊನಾ ಸೋಂಕು ತಗುಲಿರುವ ಗ್ರಾಮೀಣ ಪ್ರದೇಶದ ಬಡ ಜನರಿಗೆ ಉಚಿತ ಊಟ, ಔಷಧ ನೀಡಿ, ಬಡ ಜನರ ಕಷ್ಟಕ್ಕೆ ಹೆಗಲು ಕೊಟ್ಟು ನಾವು ನಿಮ್ಮೊಂದಿಗೆ ಇದ್ದೇವೆ ಎಂದು ತಾಲೂಕಿನ ಜನರಿಗೆ ಧೆ„ರ್ಯ ತುಂಬುತ್ತಿದ್ದಾರೆ.