Advertisement

ಕಡಲ್ಕೊರೆತ ಸ್ಥಳಕ್ಕೆ ಶಾಸಕ ಗೋಪಾಲ ಪೂಜಾರಿ ಭೇಟಿ

03:35 AM Jun 29, 2017 | Team Udayavani |

ಕುಂದಾಪುರ: ಕಡಲ್ಕೊರೆತಕ್ಕೆ ತುತ್ತಾಗಿರುವ ಗಂಗೊಳ್ಳಿ ಗ್ರಾಮದ ಬ್ಯಾಲಿಕೊಡೇರಿ ಪ್ರದೇಶದಕ್ಕೆ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ  ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಕಡಲ್ಕೊರೆತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ಅವರು ಮುಂಜಾಗ್ರತಾ ಕ್ರಮವಾಗಿ ಕಡಲ್ಕೊರೆತ ತಡೆಯಲು ಕೂಡಲೇ ತಾತ್ಕಾಲಿಕ ತಡೆಗೋಡೆ ಕಾಮಗಾರಿಯನ್ನು ನಡೆಸುವಂತೆ ಸಂಬಂಧಪಟ್ಟ ಇಲಾಖೆಯ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ಗಂಗೊಳ್ಳಿ ಗ್ರಾಮದ ಬ್ಯಾಲಿಕೊಡೇರಿ, ಖಾರ್ವಿಕೇರಿ ಹಾಗೂ ಬಂದರು ಬೇಲಿಕೇರಿ ಪ್ರದೇಶಗಳಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಸುಮಾರು 12 ಮನೆಗಳು ಅಪಾಯದಂಚಿನಲ್ಲಿದೆ. ಅನೇಕ ಮರಗಳು ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದೆ. ಆದ್ದರಿಂದ ಕಡಲ್ಕೊರೆತವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕ ತಡೆಗೋಡೆ ನಿರ್ಮಿಸುವಂತೆ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅ ಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 

ಕಡಲ್ಕೊರತದ ಹಾನಿಯ ಬಗ್ಗೆ ಹಾಗೂ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಕಾರಿಗಳು ಹಾಗೂ ಉಪವಿಭಾಗಾ ಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದರು.

ತಾ.ಪಂ. ಸದಸ್ಯ ರಾಜು ದೇವಾಡಿಗ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್‌, ಬಂದರು ಇಲಾಖೆಯ ಎಂಜಿನಿಯರ್‌ ವಿಜಯ ಶೆಟ್ಟಿ, ದೇವರಾಯ ಶೇರುಗಾರ್‌, ಸುಶೀಲ ಮೊದಲಾದವರು ಉಪಸ್ಥಿತರಿದ್ದರು.

Advertisement

ಶಾಶ್ವತ ತಡೆಗೋಡೆ ರಚನೆ
ಗಂಗೊಳ್ಳಿ ಗ್ರಾಮದ ಬಂದರು ಬೇಲಿಕೇರಿ ಮತ್ತು ಖಾರ್ವಿಕೇರಿ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ ರಚನೆ ಬಗ್ಗೆ ಟೆಂಡರ್‌ ನಡೆದಿದ್ದು, ಅತಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಇದರೊಟ್ಟಿಗೆ ಕಡಲ್ಕೊರೆತ ಸಂಭವಿಸಿದ ಸ್ಥಳಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಅ ಕಾರಿಗಳಿಗೆ ಆದೇಶಿಸಲಾಗಿದೆ. ಕಡಲ್ಕೊರೆತ ತಡೆಗಟ್ಟಲು ರಾಜ್ಯ ಸರಕಾರ  ಕ್ರಮಕೈಗೊಂಡಿದ್ದು, ಈ ವಿಚಾರದಲ್ಲಿ ಜನರನ್ನು ತಪ್ಪು³ದಾರಿಗೆ ಎಳೆಯುವ ಪ್ರಯತ್ನ ಖಂಡನೀಯ. 
ಗೋಪಾಲ ಪೂಜಾರಿ

Advertisement

Udayavani is now on Telegram. Click here to join our channel and stay updated with the latest news.

Next