ಕಾಪು: ಈ ಬಾರಿ ಉಡುಪಿ ಜಿಲ್ಲೆಯನ್ನು ಕಾಡಿದ ಎಂಒ ಭತ್ತದ ಬೀಜದ ಕೊರತೆ ಕುರಿತಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿ ಸರಕಾರದ ಗಮನ ಸೆಳೆದಿದ್ದಾರೆ.
ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಉತ್ತರಿಸಿದ್ದು, ಕಳೆದ ಸಾಲಿನಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಎಂ.ಒ.4 ಭತ್ತದ ಬೀಜ ಉತ್ಪಾದನೆಯಲ್ಲಿ ಕೊರತೆ ಉಂಟಾಗಿತ್ತು. ಆದರೆ ರೈತರಿಗೆ ತೊಂದರೆ ಆಗದಂತೆ ಬದಲಿ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಗೆ 249.50 ಕ್ವಿಂಟಾಲ್ ಎಂಒ-4 ಬಿತ್ತನೆ ಬೀಜವನ್ನು ಸರಬರಾಜು ಮಾಡಲಾಗಿದೆ. ಎಂಒ4 ತಳಿಗೆ ಪರ್ಯಾಯವಾಗಿ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತ 440 ಕ್ವಿಂಟಾಲ್, ಉಮಾ 196.50 ಕ್ವಿಂಟಾಲ್ ಮತ್ತು ಜ್ಯೋತಿ 79.50 ಕ್ವಿಂಟಾಲ್ ಬಿತ್ತನೆ ಬೀಜವನ್ನು ಸರಬರಾಜು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಾರಿ ಎಂಒ4 ಭತ್ತದ ಬೀಜ ಕೊರತೆಯಾಗಿರುವ ಕುರಿತಂತೆ ಉದಯವಾಣಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.