Advertisement

ಬೈಕಿನಲ್ಲಿ ಹಳ್ಳಿ ಸುತ್ತಿ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತಿರುವ ಶಾಸಕ ಎಚ್.ಡಿ.ತಮ್ಮಯ್ಯ

03:39 PM May 30, 2023 | Team Udayavani |

ಚಿಕ್ಕಮಗಳೂರು: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಎಚ್ ಡಿ ತಮ್ಮಯ್ಯ ಅವರು ಸದ್ಯ ಬೈಕಿನಲ್ಲಿ ಹಳ್ಳಿ-ಹಳ್ಳಿ ಸುತ್ತುತ್ತಿದ್ದಾರೆ. ಯುವಕರ ಜೊತೆಗೆ ಹಳ್ಳಿ ರೌಂಡ್ಸ್ ಹಾಕುತ್ತಿರುವ ಶಾಸಕ ತಮ್ಮಯ್ಯ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ.

Advertisement

ಚಿಕ್ಕಮಗಳೂರು ತಾಲೂಕಿನ ಹಳ್ಳಿಗಳನ್ನ ಸುತ್ತುತ್ತಿರುವ ಶಾಸಕ ತಮ್ಮಯ್ಯ ಅವರಿಗೆ ಯುವಕರು ಸಾಥ್ ನೀಡುತ್ತಿದ್ದಾರೆ.

ಇದನ್ನೂ ಓದಿ:ಪಠ್ಯಪುಸ್ತಕ ವಿಚಾರದಲ್ಲಿ ಬಿಜೆಪಿ ಮಾಡಿದ ಎಡವಟ್ಟು ಸರಿ ಮಾಡುತ್ತೇವೆ: ಸಚಿವ ಮಹದೇವಪ್ಪ

ಚುನಾವಣೆಗೆ ಎರಡು ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದ ತಮ್ಮಯ್ಯ ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಶಾಸಕರಾಗಿದ್ದ ಸಿ.ಟಿ ರವಿ ಅವರನ್ನು ತಮ್ಮಯ್ಯ ಐದು ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next