Advertisement

ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ: ಹಾಲಪ್ಪ ವಿಶ್ವಾಸ

08:07 PM Nov 07, 2020 | Suhan S |

ಸಾಗರ: ಕಳೆದ ಐದು ದಶಕಗಳ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎನ್ನುವ ವಿಶ್ವಾಸ ಮೂಡಿದೆ ಎಂದು ಶಾಸಕ ಎಚ್‌. ಹಾಲಪ್ಪ ಹರತಾಳು ತಿಳಿಸಿದರು.

Advertisement

ಬೆಂಗಳೂರಿನ ಕೃಷ್ಣಾದಲ್ಲಿ ಶುಕ್ರವಾರಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಸಂಸದರು ಮತ್ತು ಶಾಸಕರು, ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಹಿಂದೆ ಹಿರೇಭಾಸ್ಕರ ಮತ್ತು ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣ ಸಂದರ್ಭ ದಲ್ಲಿ ಸಾವಿರಾರು ಕುಟುಂಬ ಗಳು ನಿರಾಶ್ರಿತರಾಗಿ ಜಿಲ್ಲೆಯ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದಾರೆ. ಕೆಲವರು ಅರಣ್ಯ, ಕಂದಾಯ ಭೂಮಿ, ಗೋಮಾಳ, ಗ್ರಾಮ ಠಾಣಾ ಹೀಗೆ ಬೇರೆಬೇರೆ ಕಡೆ ವಾಸವಾಗಿದ್ದಾರೆ. ಅವರಿಗೆ ಈ ತನಕ ಹಕ್ಕುಪತ್ರ ಸಹ ಸಿಕ್ಕಿಲ್ಲ ಎಂದರು.

ಈ ಸಮಸ್ಯೆಯನ್ನು ಬಗೆಹರಿಸಬೇಕು ಎನ್ನುವುದು ನನ್ನ ಜೀವನದ ಮಹತ್ವಾ ಕಾಂಕ್ಷೆಗಳಲ್ಲಿ ಒಂದಾಗಿದೆ. ಶಾಸನಸಭೆಯಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಸಹ ಮಾಡಿದ್ದೇನೆ. ಇಂದಿಗೂ ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಕುಟುಂಬ ಹಕ್ಕುಪತ್ರಕ್ಕಾಗಿ ಸರ್ಕಾರದ ಕಡೆ ನೋಡುತ್ತಿದೆ. ಮುಖ್ಯಮಂತ್ರಿಗಳು ಈ ದಿನ ಸಭೆ ನಡೆಸಿ ಶರಾವತಿ ಮುಳುಗಡೆ ಸಂತ್ರಸ್ತರ ಬಗ್ಗೆ ಕಾಳಜಿ ವಹಿಸಿರುವುದು ಸ್ವಲ್ಪ ನೆಮ್ಮದಿ ತಂದಿದೆ ಎಂದು ತಿಳಿಸಿದರು.

ಸಮಸ್ಯೆಯ ಅರಿವಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಅವರಿಗೆ ಸಂತ್ರಸ್ತರ ಸಮಸ್ಯೆ ತಿಳಿಸಲಾಯಿತು. ಇದರ ಬಗ್ಗೆ ಮಾಹಿತಿ ಹೊಂದಿದ್ದ ಸಿಎಂ ಇದಕ್ಕಾಗಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚನೆ ಮಾಡಿದ್ದಾರೆ. ಶೀಘ್ರದಲ್ಲಿ ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗೆ ಶೀಘ್ರ ಪರಿಹಾರ ದೊರಕುವ ಎಲ್ಲ ಸಾಧ್ಯತೆ ಇದೆ ಎಂದು ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next