Advertisement

ಶಾಸಕ ಹರತಾಳು ಹಾಲಪ್ಪ, ಪತ್ನಿ, ಇಬ್ಬರು ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢ

05:10 PM Aug 04, 2020 | keerthan |

ಶಿವಮೊಗ್ಗ: ಮುಖ್ಯಮಂತ್ರಿಗಳ ತವರು ಜಿಲ್ಲೆಯ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.  ಸಾಗರ ಶಾಸಕ ಹರತಾಳು ಹಾಲಪ್ಪ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ.

Advertisement

ಎಂಎಸ್ಐಎಲ್ ಬೋರ್ಡ್ ಅಧ್ಯಕ್ಷರಾಗಿರುವ ಶಾಸಕ ಹರತಾಳು ಹಾಲಪ್ಪ ತನಗೆ ಕೋವಿಡ್-19 ಸೋಂಕು ದೃಢವಾದ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಶಾಸಕ ಹಾಲಪ್ಪ ಅವರ ಪತ್ನಿ, ಕಾರು ಚಾಲಕ ಹಾಗೂ ಓರ್ವ ಸಿಬ್ಬಂದಿಗೆ ಕೂಡಾ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತನಗೆ ಕೋವಿಡ್-19 ಸೋಂಕು ತಾಗಿರುವ ಕಾರಣದಿಂದ ತನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹಾಲಪ್ಪ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next