ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸುಳ್ಳು ಆರೋಪ ಮಾಡಿದ್ದು, ಕೂಡಲೇ ಕ್ಷಮೆ ಯಾಚಿಸಬೇಕು. ಕ್ಷಮೆಯಾಚಿಸದಿದ್ದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ ದೂರುಗಳನ್ನು ದಾಖಲಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ನಿಂದ ಕಾನೂನು ತಜ್ಞ ರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಕ್ರಿಮಿನಲ್ ಮತ್ತು ಸಿವಿಲ್ ಎರಡೂ ವಿಭಾಗದಲ್ಲಿ ಮೊಕದ್ದಮೆ ಹೂಡಲು ಉದ್ದೇಶಿಸಲಾಗಿದೆ ಎಂದು ತಿಳಿದರು.
ಚುನಾವಣೆ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಿಕೆ ನಡೆದಿದ್ದು, ಅದರಿಂದ ಪೂಂಜ ಜಯಗಳಿಸಿದ್ದಾರೆ ಎಂದು ಇದೇ ವೇಳೆ ಹರೀಶ್ ಕುಮಾರ್ ಆರೋಪಿಸಿದರು.