Advertisement

ಕಂಪ್ಲಿ ಗಣೇಶ್‌ ಜಾಮೀನು ಅರ್ಜಿ: ಪೊಲೀಸರಿಗೆ ನೋಟಿಸ್‌

01:39 AM Apr 02, 2019 | Sriram |

ಬೆಂಗಳೂರು: ವಿಜಯನಗರ (ಹೊಸಪೇಟೆ) ಕ್ಷೇತ್ರದ ಶಾಸಕ ಆನಂದ್‌ ಸಿಂಗ್‌ ಮೇಲಿನ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರವಾಗಿ ಹೈಕೋರ್ಟ್‌ ಸೋಮವಾರ ಬಿಡಿದಿ ಪೊಲೀಸ್‌ ಠಾಣಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿದೆ.

Advertisement

ಜಾಮೀನು ಕೋರಿ ಶಾಸಕ ಗಣೇಶ್‌ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಬಿ.ಎ. ಪಾಟೀಲ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ಬಿಡದಿ ಪೊಲೀಸ್‌ ಠಾಣಾಧಿಕಾರಿಗೆ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಏ.8ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಗಣೇಶ್‌ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಶಾಸಕರಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಬೇಕಿದೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.

ಈ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ಗಣೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ.25ರಂದು ವಜಾಗೊಳಿಸಿತ್ತು. ಆ ಹಿನ್ನೆಲೆಯಲ್ಲಿ ಅವರು ಜಾಮೀನು ಕೋರಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next