ಬೆಂಗಳೂರು: ರಾಜ್ಯ ವಿಧಾನಮಂಡಲದ ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಹಿಂದೆ ಸರಿದಿದ್ದು, ಕೃಷ್ಣ ಬೈರೇಗೌಡರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ.
ಕಾರಣವೇನು?
ರಮೇಶ್‌ಕುಮಾರ್ ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 521 ಕೋ. ರೂ. ಮೊತ್ತದ ಹಗರಣ ಆರೋಪ ಪ್ರಸ್ತಾವಿಸಿ ಕಾಂಗ್ರೆಸ್ಸನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಸಿದ್ಧತೆ ಮಾಡಿಕೊಂಡಿತ್ತು.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಸಚಿವರೊಬ್ಬರು ಈ ಬಗ್ಗೆ ದಾಖಲೆ ಸಂಗ್ರಹಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಈ ಮಾಹಿತಿ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ರಮೇಶ್ ಕುಮಾರ್ ಜತೆ ಮಾತನಾಡಿ, ಕೃಷ್ಣಬೈರೇಗೌಡರ ಹೆಸರು ಸೂಚಿಸಿದರು.
ಅದರಂತೆ ರಮೇಶ್‌ಕುಮಾರ್ ಅವರು ವೈಯಕ್ತಿಕ ಕಾರಣದಿಂದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪೀಕರ್‌ಗೆ ತಿಳಿಸಿದ್ದರು.
ಇದನ್ನೂ ಓದಿ:ನವೆಂಬರ್‌ನಲ್ಲಿ 17.5 ಲಕ್ಷ ವಾಟ್ಸ್‌ಆ್ಯಪ್ ಖಾತೆ ಬ್ಯಾನ್
ಜ.4ರಂದು ಸಭೆ: ಈ ಮಧ್ಯೆ, ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮೊದಲ ಸಭೆ ಮಂಗಳವಾರ ನಿಗದಿಯಾಗಿದೆ. ಕೃಷ್ಣ ಬೈರೇಗೌಡರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಲಿದೆ.