Advertisement

ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಗೆಲುವು ಖಚಿತ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ

07:22 PM Apr 15, 2021 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರವಾಗಿ ಶಾಸಕಿ ಲಕ್ಷ್ಮಿ  ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

Advertisement

ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಅವರು ಬೆಳಗಾವಿ ಲೋಕಸಭಾ ಕ್ಷೇತ್ರ ಮರಳಿ ಕಾಂಗ್ರೆಸ್‌ ತೆಕ್ಕೆಗೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ಪ್ರಚಾರ ಸಭೆಗಳನ್ನು ನಡೆಸಿ ಅವರು ಮಾತನಾಡಿದರು.

ಮಾರಿಹಾಳ ಗ್ರಾಮದಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಿದ ಅವರು ಕಳೆದ ವಿಧಾನಸಭೆ ಚುನಾವಣೆಯಂತೆ ಈ ಬಾರಿಯೂ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಸತೀಶ ಜಾರಕಿಹೊಳಿ ಹಾಗೂ ಲಕ್ಷಿ¾ ಹೆಬ್ಟಾಳಕರ ಗ್ರಾಮದ ಶ್ರೀ ಬಸವೇಶ್ವರ ಹಾಗೂ ವಾಲ್ಮೀಕಿ ಸಮಾಜದ ನಾಮಫಲಕಕ್ಕೆ ಗೌರವ ಸಲ್ಲಿಸಿದರು. ನಂತರ ಮೊದಗಾ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ಟಾಳಕರ, ನಾನು ಮಾಡಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳಿಗೆ ನೀವು ಸಹಕಾರ ಹಾಗೂ ಬೆಂಬಲ ನೀಡಿದ್ದೀರಿ. ಹಾಗೆಯೇ ಅವುಗಳನ್ನು ಮುಂದುವರಿಸಿಕೊಂಡು ಹೋಗಲು ಹಾಗೂ ನನ್ನ ಕೈಗೆ ಇನ್ನಷ್ಟು ಬಲ ತುಂಬಲು ಸತೀಶ ಜಾರಕಿಹೊಳಿ ಅವರಿಗೆ ಮತ ನೀಡಬೇಕು ಎಂದು ಕೋರಿದರು. ಬಳಿಕ ಪಂತ ಬಾಳೇಕುಂದ್ರಿ ಮತ್ತು ಕೆಕೆ ಕೊಪ್ಪ ಗ್ರಾಮದಲ್ಲಿ ಸತೀಶ ಜಾರಕಿಹೊಳಿ ಅವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ ಯಾಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next