Advertisement

ಕಾಫಿ ಮಂಡಳಿ ರದ್ದುಪಡಿಸುವಂತೆ ವಿಧಾನಸಭೆಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಆಗ್ರಹ

05:31 PM Sep 20, 2022 | Team Udayavani |

ಬೆಂಗಳೂರು: ಕಾಫಿನಾಡಿನ ರೈತರಿಗೆ ಉಪಯೋಗವಿಲ್ಲದ ಈಗಾಗಲೇ ಅಸ್ತಿತ್ವದಲ್ಲಿರುವ ಕಾಫಿ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ಕಾಫಿ ಅಭಿವೃದ್ಧಿ ಮಂಡಳಿಯಿಂದ 2018ರಿಂದ ಕಾಫಿ ಬೆಳೆ ರೈತರಿಗೆ ಇದುವರೆಗೂ ಯಾವುದೇ ಅತಿವೃಷ್ಟಿ ಪರಿಹಾರ ಬಂದಿಲ್ಲ, ಈ ಬಾರಿ ಮಲೆನಾಡು ಭಾಗದಲ್ಲಿ ಶೇ 33ರಷ್ಟು ಮಳೆಯಾಗಿದೆ ಎಂದು ಕೃಷಿ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ ವರದಿ ನೀಡಿದೆ. ಆದರೆ ಕಾಫಿ ಅಭಿವೃದ್ಧಿ ಮಂಡಳಿ ಶೇ 22ರಷ್ಟು ಮಳೆಯಾಗಿದೆ ಎಂದು ವರದಿ ನೀಡಿದೆ. ಆದರೆ ಈ ಬಾರಿ ಮಲೆನಾಡು ಭಾಗದಲ್ಲಿ  ಅತ್ಯಧಿಕ ಮಳೆಯಾಗಿದೆ ಈ ರೀತಿ ಸುಳ್ಳು ವರದಿ ನೀಡಿ ಜನರ ಹಾದಿ ತಪ್ಪಿಸುವುದು ಸರಿಯಲ್ಲ ಎಂದು ತಿಳಿಸಿದರು.

ಕಾಫಿ ಅಭಿವೃದ್ಧಿ ಮಂಡಳಿಯಿಂದ ಯಾವುದೇ ಉಪಯೋಗವಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮನ್ನು ನಿರ್ಲಕ್ಷಿಸಿವೆ ಎಂಬ ಆತಂಕದಲ್ಲಿ  ಬೆಳೆಗಾರರು ಇದ್ದಾರೆ. ಕಾಫಿಯಿಂದ ಈ ಹಿಂದೆ ವಾರ್ಷಿಕವಾಗಿ ವಿದೇಶಿ ವಿನಿಮಯದಿಂದ ಐದು ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತಿತು, ಪ್ರಸ್ತುತ 9 ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತದೆ ಎಂದು ಹೇಳಿದರು.

ಕಾಫಿಯನ್ನು ದೊಡ್ಡ ಉದ್ಯಮ, ವಾಣಿಜ್ಯ ಬೆಳೆಯನ್ನಾಗಿ ಪರಿಗಣಿಸಿರುವುದು ಸರಿಯಲ್ಲ. ಇದನ್ನು ಕೃಷಿ ಬೆಳೆಯನ್ನಾಗಿ ಪರಿಗಣಿಸಿದರೆ ರೈತರಿಗೆ ಸರ್ಕಾರದ ಸವಲತ್ತುಗಳು ದೊರೆಯಲಿದೆ. ಕೇಂದ್ರ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯಲ್ಲಿ ತರಬೇಕು ಎಂದು ಆಗ್ರಹಿಸಿದರು.

ಮಲೆನಾಡು ಭಾಗದಲ್ಲಿ ಪ್ರತಿವರ್ಷ ಹೆಚ್ಚು ಪ್ರಮಾಣದ ಮಳೆಯಾಗಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಚಿಕ್ಕಮಗಳೂರು, ಮಡಿಕೇರಿ, ಹಾಸನ ಜಿಲ್ಲೆಯನ್ನು ಅತಿವೃಷ್ಢಿ ಪ್ರದೇಶ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next