Advertisement

ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲೇ ಬೆಲೆ ಸಿಗ್ತಿಲ್ಲ: ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಭಟನೆ

12:03 PM Aug 12, 2021 | Team Udayavani |

ಬೆಂಗಳೂರು: ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಇಂದು ತಮ್ಮ ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸಿದರು.

Advertisement

“ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲೇ ಯಾಕೋ ಬೆಲೆ ಸಿಗುತ್ತಿಲ್ಲ. ರಿಸರ್ವ್ ಕ್ಷೇತ್ರ ಎನ್ನುವ ಕಾರಣಕ್ಕೋ ಯಾಕೋ ಕಡೆಗಣಿಸುತ್ತಿದ್ದಾರೆ. ನಮ್ಮ ಸರ್ಕಾರವೇ ಈ ತರಹ ತಾರತಮ್ಯ ಮಾಡಬಾರದು” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮದು ಆದಷ್ಟು ಬೇಗ ಸಾಮಾನ್ಯ ಕ್ಷೇತ್ರವಾಗಲಿ ಎಂದೆಸುತ್ತಿದೆ. ಬಹಳ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಏಕಾಏಕಿ ಬುಧವಾರ ಕಂದಾಯ ಇಲಾಖೆ ಪಟ್ಟಿ ಮಾಡಿ ಮೂಡಿಗೆರೆ ಕ್ಷೇತ್ರವನ್ನು ಕೈ ಬಿಡಲಾಗಿದೆ. ಸಂಜೆಯವರೆಗೂ ನಾನು ಇಲ್ಲಿಯೇ ಕೂರುತ್ತೇನೆ. ಎನ್ ಡಿಆರ್ ಎಫ್ ಪಟ್ಟಿಯಲ್ಲಿ ಮೂಡಿಗೆರೆ ಸೇರಿಸಬೇಕು ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಹಾರ ಕೊಡಲೇಬೇಕು ಎಂದಯು ಆಗ್ರಹಿಸಿದರು.

ಇದನ್ನೂ ಓದಿ:ಮೋದಿ ವಿರುದ್ಧ ಪಡೆ ಕಟ್ಟಲು ಪ್ರತಿಪಕ್ಷಗಳ ಪ್ರಮುಖ ನಾಯಕರಿಗೆ ಸೋನಿಯಾ ಕರೆ..!?

ಆರ್. ಅಶೋಕ್ ಈ ತರಹ ಮಾಡಿದಾರೆ ಎಂದು ಅನಿಸುತ್ತಿಲ್ಲ. ಎಲ್ಲ ಉಸ್ತುವಾರಿ ಮಂತ್ರಿಗಳು ಬರುತ್ತಾರೆ, ಆದರೆ ಏನೂ ಮಾಡಲ್ಲ. ಇವರಿಗೆ ಬರಿ ಮಾತಲ್ಲಿ ಹೇಳಿದರೆ ಅರ್ಥವಾಗಲ್ಲ. ಅದಕ್ಕಾಗಿ ನಾನು ಇಲ್ಲಿಯೇ ಕೂತಿರುತ್ತೇನೆ ಶಾಸಕ ಎಂಪಿ ಕುಮಾರಸ್ವಾಮಿ ಎಂದರು

Advertisement

2019 ರಲ್ಲಿ ಅತಿವೃಷ್ಟಿಯಾಗಿತ್ತು. ಆರು ಜನ ಮನೆ ಸಮೇತ ಕೊಚ್ಚಿಕೊಂಡು ಹೋಗಿದ್ದರು. ಮನೆಗಳು ಕಾಫಿ ತೋಟ ಕೊಚ್ಚಿಕೊಂಡು ಹೋಗಿತ್ತು. ಆದರೂ ಪರಿಹಾರ ನೀಡದೆ ನಿರ್ಲಕ್ಷ್ಯ ಮಾಡಲಾಗಿತ್ತು. ಶಿವಮೊಗ್ಗ ನಗರ ಎನ್ ಡಿ ಆರ್ ಎಫ್ ವ್ಯಾಪ್ತಿಗೆ ಸೇರತ್ತದೆ. ಮೂಡಿಗೆರೆಯಲ್ಲಿ 900 ಸೆ.ಮೀಟರ್ ಮಳೆಯಾಗಿದೆ. ನಾನು 2018ರಲ್ಲಿ ಶಾಸಕನಾದಾಗ ಕುಮಾರಸ್ವಾಮಿ ಸಿಎಂ ಆಗಿದ್ದರು. ಕುಮಾರಸ್ವಾಮಿ ಸಿಎಂ ಆದಾಗ ನಮಗೆ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗಿತ್ತು. ಆದರೆ ನಮ್ಮದೇ ಸರ್ಕಾರ ಇದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಶಾಸಕ ಎಂಪಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next