ಬೆಂಗಳೂರು: ಸಚಿವ ಸ್ಥಾನ ಸಿಗುವವರೆಗೂ ಸಚಿವ ಸ್ಥಾನಕ್ಕಾಗಿ ಕೇಳುತ್ತಿದ್ದರು, ಸಚಿವ ಸ್ಥಾನ ಸಿಕ್ಕಿದಮೇಲೆ ಖಾತೆಗಾಗಿ ಅಸಮಾಧಾನ ಮಾಡುವುದು ಸರಿಯಲ್ಲ. ಇದರಿಂದ ಪಕ್ಷ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಯಾರು ಕೂಡ ಭಿನ್ನಮತೀಯ ಚಟುವಟಿಕೆ, ಅಸಮಾಧಾನ ಹೊರ ಹಾಕಬಾರದು. ಎಲ್ಲರೂ ಅನುಸರಿಸಿಕೊಂಡು ಮಾಡಿಕೊಂಡು ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದರು.
ಇದನ್ನೂ ಓದಿ:ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಈ ರೀತಿಯ ಭಿನ್ನಮತೀಯ ಚಟುವಟಿಕೆಗಳು, ಅಸಮಾಧಾನವನ್ನು ಯಾವುದೇ ಸಚಿವರು ಹೊರ ಹಾಕಬಾರದು. ಇದೇ ರೀತಿ ಮುಂದುವರೆಸಿದರೆ ಅಂತಹ ಸಚಿವರ ಮನೆ ಮುಂದೆ ನಾವುಗಳೇ ಧರಣಿ ಮಾಡಬೇಕಾಗುತ್ತದೆ ಎಂದು ಅಸಮಾಧಾನಿತ ಶಾಸಕರಿಗೆ ವಿರೂಪಾಕ್ಷಪ್ಪ ಎಚ್ಚರಿಕೆ ನೀಡಿದರು.
ನಾನು ಭಿನ್ನಮತೀಯ ಚಟುವಟಿಕೆಗಳಲ್ಲಿ ತೊಡಗಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ನೀರಾವರಿ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಚಾರ್ಯ ಜೊತೆ ಮಾತನಾಡಿದ್ದೇನೆ ಆದರೆ ನಾನು ಯಾವುದೇ ಭಿನ್ನಮತಿಯ ಚಟುವಟಿಕೆ ಮಾಡಿಲ್ಲ ಎಂದು ವಿರೂಪಾಕ್ಷಪ್ಪ ಹೇಳಿದರು.