ಅಥಣಿ: ಅತೃಪ್ತ ಕಾಂಗ್ರೆಸ್ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಶ್ ಕಮಟಳ್ಳಿ ಅವರು ಇಂದು ದಿಢೀರನೆ ಪ್ರತ್ಯಕ್ಷರಾಗಿದ್ದಾರೆ. ಅಥಣಿಯಲ್ಲಿ ಶುಕ್ರವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡು ಮಾಧ್ಯಮದವರ ಮುಂದೆ ಮಾತನಾಡಿದ ಮಹೇಶ್ ಅವರು, ‘ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ’ ಎಂದು ಹೆಳಿದರು.
ಮತ್ತು ತನಗೆ ಬೆನ್ನು ನೋವಿನ ಸಮಸ್ಯೆ ಇದ್ದ ಕಾರಣ ಚಿಕಿತ್ಸೆ ಪಡೆಯುತ್ತಿದ್ದೆ ಹಾಗಾಗಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗಲು ಸಾಧ್ಯವಾಗಿರಲಿಲ್ಲ ಎಂಬ ವಿಷಯವನ್ನು ಮಹೇಶ್ ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಮಹೇಶ್ ಕಮಟಳ್ಳಿ ಹೇಳಿದ್ದಿಷ್ಟು…
– ನಾನು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ.
– ಕಳೆದ 25ವರ್ಷಗಳಿಂದ ಪಕ್ಷದಲ್ಲಿದ್ದೇನೆ, ನಾನು ಯಾವತ್ತಿಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ
– ಯಾವುದೆ ನಿಗಮ ಮಂಡಳಿಗಳ ಸ್ಥಾನ ಆಕಾಂಕ್ಷಿ ನಾನಲ್ಲ.