ಯಳಂದೂರು: ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಯ ನೂತನ ಕಟ್ಟಡಕ್ಕೆ ಶಾಸಕ ಎನ್. ಮಹೇಶ್ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ತೋಟಗಾರಿಕೆ ಇಲಾಖೆಯ ಹಳೆ ಕಟ್ಟಡ ಶಿಥಿಲವಾಗಿತ್ತು. ನೂತನ ಕಟ್ಟಡ ನಿರ್ಮಾಣಕ್ಕೆ ಹಲವು ದಿನಗಳಿಂದ ಬೇಡಿಕೆ ಇತ್ತು. ಈಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆಯಿಂದ 40 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ.3ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ಟೆಂಡರ್‌ನಲ್ಲಿದ್ದು, ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರ ಹಾಗೂ ಎಂಜಿನಿಯರ್‌ಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ತಾಲೂಕಿನ ಮದ್ದೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕೊಠಡಿ ನಿರ್ಮಾಣದ 15.75 ಲಕ್ಷ ರೂ. ವೆಚ್ಚದ ಕಟ್ಟಡಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಿದರು. ಇಲ್ಲಿನ ಅಪೂರ್ಣಗೊಂಡಿರುವ ಕಟ್ಟಡದಲ್ಲಿ ನೆರೆಯವರು ಕುರಿಗಳನ್ನು ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೆ ಪಕ್ಕದಲ್ಲೇ ದನದ ಕೊಟ್ಟಿಗೆ ಇದೆ. ಇದರಿಂದ ಶಾಲಾ ಪರಿಸರಕ್ಕೆ ಧಕ್ಕೆಯಾಗುತ್ತಿದೆ ಎಂದು ಸ್ಥಳೀಯರು ದೂರಿದರು. ಈ ಕುರಿತು ಪೊಲೀಸರಿಗೆ ಸೂಚನೆ ನೀಡಿದ ಶಾಸಕರು ಕೂಡಲೇ, ಇದನ್ನು ತೆರವುಗೊಳಿಸಿ ಅವರಿಗೆ ನೋಟಿಸ್ ನೀಡುವಂತೆ ತಿಳಿಸಿದರು. ಅಲ್ಲದೇ ಈ ಅಪೂರ್ಣ ಕಟ್ಟಡವನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಇದಕ್ಕೂ ಮುಂಚೆ ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿನ20 ಲಕ್ಷ ರೂ. ವೆಚ್ಚದ ಒಕ್ಕಲಿಗರ ಭವನದ ಕಟ್ಟಡ ಕಾಮಗಾರಿಗೂ ಚಾಲನೆ ನೀಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2.19 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ಇನ್ನಷ್ಟು ಅನುದಾನ ನೀಡುವಂತೆ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ನೀಡುವುದಾಗಿ ಶಾಸಕರು ಭರವಸೆ ನೀಡಿದರು.
ತಾಪಂ ಸದಸ್ಯೆಮಲ್ಲಾಜಮ್ಮ,ಇಒಬಿ.ಎಸ್. ರಾಜು, ಪಂಚಾಯತ್ ರಾಜ್ ಎಇಇ ಹರೀಶ್, ಜೆಇ ಧನಲಕ್ಷ್ಮೀ, ನಿರ್ಮಿತಿ ಕೇಂದ್ರ ಜೆಇ ನಂದೀಶ, ತೋಟಗಾರಿಕೆಇಲಾಖೆ ಸಹಾಯಕ ನಿರ್ದೇಶಕ ರಾಜು, ರಾಮಕೃಷ್ಣ,ಗ್ರಾಪಂ ಮಾಜಿ ಅಧ್ಯಕ್ಷರಾದ ಟಿ.ಮಹೇಶ್, ಬಿ.ವಿ. ರಾಜೇಗೌಡ, ಸೊಂಣ, ಎನ್. ನಾಗೇಶ್, ಲಿಂಗರಾಜು, ರಂಗಸ್ವಾಮಿ, ನಂಜೇಗೌಡ, ಮಾಂಬಳ್ಳಿ ರಾಮು, ಅಂಬಳೆ ಮಹಾದೇವ ಇತರರಿದ್ದರು.