Advertisement
ಹಿರಿಯ ಮುಖಂಡ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು ಕಾಂಗ್ರೆಸ್ ಬಿಡುವ ತೀರ್ಮಾನ ಪ್ರಕಟಿಸಿ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರುವುದಾಗಿ ಘೋಷಿಸಿದರು. ಈ ಬೆಳವಣಿಗೆ ಮಧ್ಯೆಯೇ ಕೆಪಿ ಸಿಸಿ ಅಧ್ಯಕ್ಷ ಪರಮೇಶ್ವರ್ ಅವರು,ಮಾಲೀಕಯ್ಯ ಗುತ್ತೇದಾರ್ ಅವರನ್ನು ಆರು ವರ್ಷ ಪಕ್ಷ ದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
Related Articles
Advertisement
ಇದೇ ಸಂದರ್ಭದಲ್ಲಿ ಪ್ರಗತಿಪರರ ನಿಯೋಗ ಎ.ಕೆ.ಸುಬ್ಬಯ್ಯಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ಜಾತ್ಯತೀತ ಶಕ್ತಿಗಳೊಡನೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಿ ಎಂಬ ಸಲಹೆಯನ್ನೂ ನೀಡಿತು. ಇದಕ್ಕೆ ಸಿದ್ದರಾಮಯ್ಯ ಜೆಡಿಎಸ್ ಜತೆ ಮಾತ್ರ ಮೈತ್ರಿ ಸಾಧ್ಯವಿಲ್ಲ, ಇತರೆ ಸಮಾನ ಪಕ್ಷಗಳ ಜತೆ ಮಾತುಕತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.
ಇದಾದ ನಂತರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಾದಯಾತ್ರೆ, ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡೇಶ್ವರಿಯಲ್ಲಿ ನಾನೇ ನಿಲೆ¤àನೆ, ಗೆಲೆ¤àನೆ, ಕುಮಾರಸ್ವಾಮಿ ಕೇಳಿ ರಾಜಕಾರಣ ಮಾಡಬೇಕಿಲ್ಲ ಎಂದು ತಿರುಗೇಟು ನೀಡಿದರು.
ಮೈಸೂರು ಭಾಗದಲ್ಲಿ ಶಾ ಪ್ರವಾಸಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮೈಸೂರು ಭಾಗದ ಪ್ರವಾಸಕ್ಕಾಗಿ ಗುರುವಾರ ರಾತ್ರಿಯೇ ಆಗಮಿಸಿದ್ದಾರೆ. ಬೆಳಗ್ಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಅರಮನೆಗೆ ತೆರಳಿ ಸುಮಾರು ಅರ್ಧಗಂಟೆಗಳ ಕಾಲ ರಾಜವಂಶಸ್ಥರ ಜತೆಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ನವ ಶಕ್ತಿ ಸಮಾವೇಶ, ದಲಿತ ಮುಖಂಡರೊಂದಿಗೆ ಸಂವಾದ ನಡೆಸಿ, ಅವ ರೊಂದಿಗೆ ಭೋಜನ ಕೂಟ ನಡೆಸಲಿದ್ದಾರೆ.