Advertisement

Hanur ;ಜಿಲ್ಲಾಧಿಕಾರಿಗಳನ್ನು ಅವಳು ಎಂದ ಶಾಸಕ ಮಂಜುನಾಥ್-ವಿಡಿಯೋ ವೈರಲ್

06:08 PM Jul 22, 2023 | Team Udayavani |

ಹನೂರು: ಚಾಮರಾಜನಗರದ ಜಿಲ್ಲಾಧಿಕಾರಿಗಳನ್ನು ಹನೂರು ಕ್ಷೇತ್ರದ ಶಾಸಕ ಮಂಜುನಾಥ್ ಅವಳು ಎಂದು ಏಕವಚನದಲ್ಲಿ ಸಂಬೋಧಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ಹರೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳು ಮತ್ತು ಸದಸ್ಯರ ಸಭೆಯನ್ನು ಆಯೋಜಿಸಲಾಗಿತ್ತು ಸಭೆಯಲ್ಲಿ ಮಾತನಾಡುತ್ತಿದ್ದ ಶಾಸಕ ಮಂಜುನಾಥ್ ರವರು ಪಟ್ಟಣ ಪಂಚಾಯಿತಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಬೇಕು ಏಕೆಂದರೆ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಪವರ್ ಅವಳಿಗಿದೆ ಎಂದು ಏಕವಚನದಲ್ಲಿ ಮಾತನಾಡಿದ್ದಾರೆ.

ಜಿಲ್ಲಾಧಿಕಾರಿಗಳನ್ನು ಏಕವಚನದಲ್ಲಿ ಮಾತನಾಡಿರುವ ಶಾಸಕ ಮಂಜುನಾಥ್ ಅವರ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next