ಬೆಂಗಳೂರು : ವಿಧಾನಸಭಾ ಚುನಾವಣೆಗೆ ಭರದ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ಮುಂದುವರಿಸಿದೆ. 2018 ರಲ್ಲಿ ಮುಳಬಾಗಿಲು ಎಸ್ ಸಿ ಮೀಸಲು ಕ್ಷೇತ್ರದಿಂದ ಪಕ್ಷೇತರರಾಗಿ ಆಯ್ಕೆಯಾಗಿದ್ದ ಶಾಸಕ ಹೆಚ್.ನಾಗೇಶ್ ಅವರನ್ನು ಬೇರೊಂದು ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
Advertisement
ನಾಗೇಶ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ನಾಗೇಶ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹದೇವಪುರ ಕ್ಷೇತ್ರದಿಂದ ಕಣಕ್ಕಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.