Advertisement

ಗುಣಮಟ್ಟದ ಕಾಮಗಾರಿಗೆ ಶಾಸಕ ನಡಹಳ್ಳಿ ಸೂಚನೆ

05:50 PM Mar 13, 2022 | Shwetha M |

ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದಿಂದ ಮುಖ್ಯ ಬಜಾರ್‌ ಮಾರ್ಗವಾಗಿ ಇಂದಿರಾ ವೃತ್ತದವರೆಗೆ ಅಂದಾಜು 5 ಕೋಟಿ ರೂ. ಸರ್ಕಾರದ ವಿಶೇಷ ಅನುದಾನದಲ್ಲಿ ನಡೆಯುತ್ತಿರುವ ಮುಖ್ಯ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಸೂಚಿಸಿದರು.

Advertisement

ಶನಿವಾರ ಸಂಜೆ ಸ್ಥಳೀಯ ಅಧಿಕಾರಿಗಳೊಂದಿಗೆ ಇಂದಿರಾ ವೃತ್ತದಲ್ಲಿ ಕಾಮಗಾರಿ ಪರಿಶೀಲಿಸಿದ ಅವರು, ಮುದ್ದೇಬಿಹಾಳ ಪಟ್ಟಣದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ವಿವಿಧ ಯೋಜನೆಗಳ ಅಡಿಯಲ್ಲಿ ಈಗಾಗಲೇ 38 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಪಟ್ಟಣದಲ್ಲಿ ಬರುವ ಎಲ್ಲ 23 ವಾರ್ಡ್‌ಗಳಲ್ಲೂ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯ ಒದಗಿಸಲಾಗುವುದು. ಈ ಕೆಲಸ ಪûಾತೀತವಾಗಿ ನಡೆಯುತ್ತದೆ. ಸದ್ಯ ಪ್ರಗತಿಯಲ್ಲಿರುವ ಬಜಾರ್‌ ರಸ್ತೆ ಕಾಮಗಾರಿಗೆ ಪಟ್ಟಣದ ವ್ಯಾಪಾರಸ್ಥರು ಸಾಕಷ್ಟು ಸಹಕಾರ ನೀಡಿದ್ದಾರೆ. ಅವರ ಆಶಯದಂತೆ ಗುಣಮಟ್ಟದ ರಸ್ತೆ ನಿರ್ಮಾಣಗೊಳ್ಳಬೇಕು ಎಂದರು.

ಈ ವೇಳೆ ಶಾಸಕರು ಇಂದಿರಾ ವೃತ್ತದಲ್ಲಿ ಪ್ರಗತಿಯಲ್ಲಿರುವ ಪ್ರಥಮ ಹಂತದ ಕಾಮಗಾರಿಯನ್ನು ಪರಿಶೀಲಿಸಿ ತೃಪ್ತಿ ವ್ಯಕ್ತಪಡಿಸಿ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಪಿಡಬ್ಲ್ಯೂಡಿ ಎಇಇ ಆರ್‌.ಎಂ.ಹುಂಡೇಕಾರ, ಪಿಡಬ್ಲ್ಯೂಡಿ ಎಂಜಿನಿಯರ್‌ಗಳಾದ ಅಶೋಕ ಬಿರಾದಾರ, ಸಂದೀಪ ಕೆ., ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ಕರ್ನಾಟಕ ಮುಸ್ಲಿಂ ಕೌನ್ಸಿಲ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ರಿಸಾಲ್ದಾರ್‌, ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಎಲ್‌.ಎಂ.ನಾಯ್ಕೊಡಿ, ಬಿಜೆಪಿ ಧುರೀಣ ರಾಜೇಂದ್ರಗೌಡ ರಾಯಗೊಂಡ, ಸ್ಥಳೀಯ ಧುರೀಣರು, ಪುರಸಭೆ ಸಿಬ್ಬಂದಿ, ಗುತ್ತಿಗೆದಾರ ಮೇಲ್ವಿಚಾರಕ ಸಿಬ್ಬಂದಿ ಸೇರಿ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next