Advertisement

ಕೋವಿಡ್ ಹೆಚ್ಚಳ ಆಸ್ಪತ್ರೆಗಳಲ್ಲಿ ಸೌಕರ್ಯಗಳ ಮಾಹಿತಿ ಪಡೆದ ಶಾಸಕ ಪರಣ್ಣ

07:32 PM Jan 17, 2022 | Team Udayavani |

ಗಂಗಾವತಿ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಬೇಗನೆ ಸಿಗುವಂತಾಗಲು ತಾಲೂಕು ಆಡಳಿತ ಪೂರ್ಣ ಸಿದ್ದತೆಯಲ್ಲಿರುವಂತೆ ಶಾಸಕ ಪರಣ್ಣ ಮುನವಳ್ಳಿ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಅವರು ಸೋಮವಾರ ನಗರದ ಸರಕಾರಿ ಉಪವಿಭಾಗ ಆಸ್ಪತ್ರೆಯ ಕೊರೊನಾ ಚಿಕಿತ್ಸಾ ಘಟಕದ ಕೋಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಭವನೀಯ ಕೊರೊನಾ ಮೂರನೇಯ ಅಲೆಯನ್ನು ಎದುರಿಸಲು ರಾಜ್ಯ ಸರಕಾರ ಸಂಪೂರ್ಣ ಸಿದ್ಧವಾಗಿದೆ. ಅಗತ್ಯವಿರುವ ಔಷಧಿ, ಅಕ್ಸಿಜನ್, ವೆಂಟಿಲೇಟರ್ ಸೇರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಈ ಭಾರಿ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆ ಇದ್ದು ಜನರಲ್ಲಿ ಕೊರೊನಾ ರೋಗದ ಜಾಗೃತಿ ಹೆಚ್ಚಿದೆ. ತಜ್ಞರ ಪ್ರಕಾರ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಜನರು ಮನೆಯಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಬೇಕು. ಹೆಚ್ಚಿನ ರೋಗ ಲಕ್ಷಣಗಳಿದ್ದರೆ ಮಾತ್ರ ಆಸ್ಪತ್ರೆಗಳಿಗೆ ದಾಖಲಾಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು. ಆಗಾಗ ಸ್ಯಾನಿಟೈಜರ್ ಅಥವಾ ಸಾಬೂನಿನ ಮೂಲಕ ಕೈಕಾಲು ತೊಳೆದುಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ|ಈಶ್ವರ ಸವಡಿ, ಬಿಜೆಪಿ ಮುಖಂಡ ಯಂಕಪ್ಪ ಕಟ್ಟಿಮನಿ, ಆಸ್ಪತ್ರೆಯ ಶಿವಾನಂದ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next