Advertisement

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

11:22 PM Jun 16, 2024 | Team Udayavani |

ಮಡಿಕೇರಿ: ಗೋಣಿಕೊಪ್ಪ ಪಟ್ಟಣದ‌ ಕೀರೆಹೊಳೆಯ ಜಾಗ ಒತ್ತುವರಿಯಾಗಿದ್ದರೆ ತತ್‌ಕ್ಷಣ ತೆರವು ಕಾರ್ಯಾಚರಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ‌ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅವರು ಸೂಚನೆ ನೀಡಿದ್ದಾರೆ.

Advertisement

ಗೋಣಿಕೊಪ್ಪ ಗ್ರಾ. ಪಂ. ವತಿಯಿಂದ ನಿರ್ಮಿಸಲಾಗಿರುವ ಟ್ರಾÂಸ್‌ ಬ್ಯಾರಿಕೇಡ್‌’ ಅನ್ನು ಉದ್ಘಾಟಿಸಿ ವನ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೀರೆಹೊಳೆಯನ್ನು ಹಿಂದಿನಂತೆ ಸಂರಕ್ಷಿಸಬೇಕಾಗಿದೆ, ಈ ಕಾರ್ಯಕ್ಕೆ ಮರು ಚಾಲನೆ ನೀಡಬೇಕು. ನದಿ, ತೊರೆ, ಹಳ್ಳಕೊಳ್ಳ ಹಾಗೂ ಜಲಾಶಯವನ್ನು ನಾಶ ಮಾಡಿ ಅಭಿವೃದ್ಧಿ ಮಾಡಬೇಕಿಲ್ಲ, ಅರಣ್ಯ, ಪರಿಸರ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಪ್ರತಿಪಾದಿಸಿದರು.

ಕೀರೆಹೊಳೆ ಯಲ್ಲಿ ಟ್ರಾÂಸ್‌ ಬ್ಯಾರಿಕೇಡ್‌ ಅಳವಡಿಸಿ ರುವುದರಿಂದ ಘನತ್ಯಾಜ್ಯ ವಿಲೇವಾರಿಗೆ ಸಹಕಾರಿಯಾಗಿದೆ. ಇದೊಂದು ರೀತಿಯ ಸಣ್ಣ ಪ್ರಯೋಗ ಎಂದರು.

ಮನೆ, ವಿದ್ಯುತ್‌, ಕುಡಿಯುವ ನೀರು ಮತ್ತಿತರ ಸೌಲಭ್ಯಕ್ಕಾಗಿ ಮನವಿಗಳು ಬರುತ್ತವೆ, ಆದರೆ ಸ್ವತ್ಛತಾ ಕಾರ್ಯಕ್ಕೆ ಮನವಿ ಮಾಡುವುದು ಕಡಿಮೆ. ಕ್ಲೀನ್‌ ಕೂರ್ಗ್‌ ತಂಡದವರು ಕೀರೆಹೊಳೆ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ಪರಿಸರ ಸಂರಕ್ಷಿಸುವಲ್ಲಿ ಸರಕಾರದೊಂದಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದು ಪೊನ್ನಣ್ಣ ತಿಳಿಸಿದರು.

Advertisement

ಪರಿಸರ ಸಂರಕ್ಷಣೆಯಲ್ಲಿ ಪ್ರತಿ ಯೊಬ್ಬರೂ ಜವಾಬ್ದಾರಿಯುತ ವಾಗಿ ನಡೆದುಕೊಳ್ಳಬೇಕು, ನದಿ, ತೊರೆ, ಹಳ್ಳಕೊಳ್ಳಗಳನ್ನು ಉಳಿಸಬೇಕು. ವ್ಯಾಪಾರ,ವಾಣಿಜ್ಯ, ಉದ್ಯಮ ನಡೆಸುವವರು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಎಲ್ಲರೂ ಕೈಜೋಡಿಸಿದಾಗ ಮಾತ್ರ ಸ್ವಚ್ಛ, ಸುಂದರ ಕೊಡಗು ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next