Advertisement
2012ರ ಅಕ್ಟೋಬರ್ 9ರಂದು ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಹಲವಾರು ಇಲಾಖೆಗಳಿಂದ ತನಿಖೆ ನಡೆದು ಅನಂತರ ತಮ್ಮ ನೇತೃತ್ವದ ಸರಕಾರ 2013ರಲ್ಲಿ ಈ ಪ್ರಕರಣವನ್ನು ಸಿಬಿಐಗೊಪ್ಪಿಸಿತ್ತು. 2023ರ ವರೆಗೂ ನಡೆದ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷಿಸಲು ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲೂಕಿನ ಜನರದ್ಧಾಗಿದೆ. ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಸೌಜನ್ಯಾ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಕ್ಷೇತ್ರದ ಶಾಸಕನ ಹಾಗೂ ವೈಯಕ್ತಿಕ ನೆಲೆಯಲ್ಲಿ ಆಗ್ರಹಿಸುವುದಾಗಿ ತಿಳಿಸಿದ್ಧಾರೆ.ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಜತೆಗಿದ್ದರು.