ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ ಲಕ್ಷಣಗಳಿಲ್ಲದ ಕಾರಣ ಮನೆಯಲ್ಲೆ ಚಿಕಿತ್ಸೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ತನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕ್ವಾರೈಂಟೈನ್ ಜೊತೆಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಶಾಸಕರ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೂ ಕೋವಿಡ್ ಸೋಂಕು ದೃಢವಾಗಿದೆ. ರವಿವಾರ ರಾತ್ರಿ ಅವರಿಗೆ ಸೋಂಕು ತಾಗಿರುವುದು ಖಚಿತವಾದ ನಂತರ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರಗೆ ದಾಖಲಾಗಿದ್ದಾರೆ.