ಹಾಸನ: ವಿದ್ಯಾರ್ಥಿಗಳು ಆತ್ಮ ವಿಶ್ವಾಸ ಮೈಗೂಡಿಸಿಕೊಂಡರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಪ್ರೀತಂ ಜೆ.ಗೌಡ ಅವರು ಹೇಳಿದರು.
ನಗರದ ಎಂ.ಜಿ. ರಸ್ತೆಯಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವತಿಯರು ತಮ್ಮ ಪದವಿ ಮುಗಿಯುವ ಹಂತಕ್ಕೆ ಬರುತ್ತಿದ್ದಂತೆ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆರ್ಥಿಕವಾಗಿ ಸದೃಢರಾದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಮ್ಮೊಳಗಿನ ಕ್ರೀಯಾಶೀಲತೆಯನ್ನು ಒಂದಿಷ್ಟು ಬಳಸಿಕೊಂಡರೆ ನಾವು ಮಾಡುವ ಕೆಲಸದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ವಿದ್ಯಾಭ್ಯಾಸದ ಸಂದರ್ಭದಲ್ಲಿ ಮೊಬೈಲ್ ಫೋನ್ ಗಳಿಗೆ ಹೆಚ್ಚು ಅಂಟಿಕೊಳ್ಳಬಾರದು. ಸಾಮಾಜಿಕ ಜಾಲ ತಾಣಗಳು ಜೀವನದಲ್ಲಿ ಒಂದು ಭಾಗವಾಗಬೇಕು. ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ಪಠ್ಯೇತರ ಚಟುವ ಟಿಕೆ ಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಶ್ರದ್ಧೆ, ಸಮಯ ಪಾಲನೆ, ಆತ್ಮವಿಶ್ವಾಸ ಬೆಳೆಸಿಕೊಂಡು ಕಲಿ ಯುವ ಮೂಲಕ ಪೋಷಕರಿಗೆ ಕೀರ್ತಿ ತರುವ ಕೆಲಸ ವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು.
ಆಸಕ್ತಿಯಿರುವ ಕ್ಷೇತ್ರದಲ್ಲಿ ಸಾಧಿಸಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶ್‌ಗೌಡ ಅವರು ಮಾತನಾಡಿ, ಯುವತಿಯರು ತಮ್ಮ 18 ರಿಂದ 24 ನೇ ವಯಸ್ಸಿನ ಅವಧಿಯಲ್ಲಿ ಅತ್ಯಂತ ಜಾಗರುಕತೆಯಿಂದ ಇದ್ದು, ಏನನ್ನು ಬೇಕಾದರೂ ಸಾಧನೆ ಮಾಡಬಲ್ಲೆ ಎಂಬ ಸಕಾರಾತ್ಮಕ ಧೋರಣೆ ರೂಢಿಸಿಕೊಳ್ಳಬೇಕು. ಇಂದಿನ ಯುವತಿಯರು ತಾವು ಓದುವ ಪದವಿಯೇ ಬೇರೆ, ವೃತ್ತಿ ಮಾಡುವುದು ಬೇರೆ ಕ್ಷೇತ್ರ ಎಂಬಂತಾಗಿದೆ. ಅದರ ಬದಲು ತಮ್ಮಗಿಷ್ಟವಾದ ಹಾಗೂ ತಮಗೆ ಆಸಕ್ತಿ ಇರುವ ಕ್ಷೇತ್ರಗಳ ಬಗ್ಗೆ ಆಸಕ್ತಿ ಹೊಂದಿ ಸಾಧನೆ ಮಾಡಬೇಕು. ಮಕ್ಕಳಿಗೆ ಏನನ್ನು ಓದಿಸಬೇಕು ಎಂಬು ವುದರ ಬಗ್ಗೆ ಈಗ ರಾಜ್ಯದಲ್ಲಿ ಚರ್ಚೆ ನಡೆಯುತ್ತಿದೆ. ಎಡಪಂಥ, ಬಲಪಂಥೀಯ ವಾದದ ಚರ್ಚೆಗಳು ನಡೆಯುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ತಜ್ಞರನ್ನು ಪಠ್ಯ ಪರಿಷ್ಕರಣೆಯ ಹೊಣೆ ನೀಡುವ ಮೂಲಕ ಮಕ್ಕಳಿಗೆ ಏನು ಬೇಕು ಎಂಬುವುದನ್ನು ಕಲಿಸಬೇಕು ಎಂದರು.
ಸತ್ಪ್ರಂಜೆಯನ್ನಾಗಿ ರೂಪಿಸಿ: ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ. ಹಂಪನಹಳ್ಳಿ ತಿಮ್ಮೇಗೌಡ ಮಾತನಾಡಿ, ಪ್ರತಿ ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಬೇಕಾದ ಹೊಣೆ ಗಾರಿಕೆ ಪೋಷಕರ ಮೇಲಿದೆ ಎಂದರು.
ಸಾಂಸ್ಕೃತಿಕ ವೇದಿಕೆ ಬಳಸಿಕೊಳ್ಳಿ: ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲ ಡಾ.ಕೆ.ಟಿ. ಕೃಷ್ಣೇಗೌಡ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ಪಠ್ಯದ ಜೊತೆಗೆ ಪಠ್ಯೇ ತರ ಚಟುವಟಿಕೆಗಳು ಮುಖ್ಯ. ವಿದ್ಯಾರ್ಥಿಗಳು ಮಕ್ಕಳು ಕೇವಲ ಪಠ್ಯಕ್ಕೆ ಮಾತ್ರ ಸೀಮತವಾಗದೆ, ತಮ್ಮಲ್ಲಿನ ಪ್ರತಿಭೆ ಅನಾವರಣ ಮಾಡಿ ಕೊಳ್ಳಲು ಸಾಂಸ್ಕೃತಿಕ ವೇದಿಕೆ ಬಳಕೆ ಮಾಡಿಕೊಳ್ಳಬೇಕು ಎಂದರು.
ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಸಾಂಸ್ಕೃತಿಕ ವೇದಿಕೆ ಸಂಚಾ ಲಕ ಹರೀಶ್ ಹಾಗೂ ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.