Advertisement

PPE ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗೆ ಶಾಸಕ ಪ್ರಿಯಾಂಕ್ ಖರ್ಗೆ ಭೇಟಿ

11:11 PM Aug 02, 2020 | Hari Prasad |

ಕಲಬುರಗಿ: ಚಿತ್ತಾಪುರ ಪಟ್ಟಣದ ನಾಗಾವಿ ಕ್ಯಾಂಪಸ್ ನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್‌ಗೆ ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ರವಿವಾರ ಸಂಜೆ ಪಿಪಿಇ ಕಿಟ್ ಧರಿಸಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು

Advertisement

ಇದೇ ಸಂದರ್ಭದಲ್ಲಿ ಸೋಂಕಿತರೊಂದಿಗೆ ಮಾತನಾಡಿದ ಶಾಸಕರು, ಆರೋಗ್ಯ ವಿಚಾರಿಸುವ ಮೂಲಕ ಧೈರ್ಯ ತುಂಬಿದರು.

ಇಲ್ಲಿ ದಾಖಲಾಗಿರುವ ಕೋವಿಡ್ 19 ಸೊಂಕಿತರಿಗೆ ಸೂಕ್ತ ಊಟೋಪಚಾರ ಹಾಗೂ ಅಗತ್ಯ ಔಷಧಿಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೂ ಮುನ್ನ ಚಿತ್ತಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋಸ್ಕ್ ಸಭೆಯಲ್ಲಿ ಭಾಗವಹಿಸಿ, ಕೋವಿಡ್ 19 ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಚಿತ್ತಾಪುರ, ಕಾಳಗಿ ಹಾಗೂ ಶಹಾಬಾದ್ ತಹಸೀಲ್ದಾರ್ ಅವರು ಒಟ್ಟಾಗಿ ಕುಳಿತು ಮಾತನಾಡಿ‌ ಚಿತ್ತಾಪುರ ತಾಲೂಕಿನಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಕ್ರಮಕೈಗೊಳ್ಳಬೇಕು. ನಾನು‌ ಎಲ್ಲ ರೀತಿಯ ಸಹಕಾರ‌ ನೀಡಲು ಸಿದ್ಧನಿದ್ದೇನೆ ಎಂದು ಶಾಸಕರು ಭರವಸೆ ಕೊಟ್ಟರು.

Advertisement

ನಾಗಾವಿ ಕ್ಯಾಂಪಸ್ ನಲ್ಲಿ ಈಗಾಗಲೇ 100 ಬೆಡ್‌ಗಳ ಕೊವೀಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಇದೇ ತೆರನಾದ 50 ಬೆಡ್‌ಗಳ ಮತ್ತೊಂದು ಕೇರ್ ಸೆಂಟರ್ ಅನ್ನು ವಾಡಿ‌ ಪಟ್ಟಣದಲ್ಲಿ ತೆರೆಯಲು ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಶಾಸಕ ಪ್ರಿಯಾಂಕ ಖರ್ಗೆ ಅವರು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next