Advertisement

ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವುದು ಜನಪ್ರಿಯ ಸರಕಾರದ ಲಕ್ಷಣವಲ್ಲ: ಶಾಸಕ ರಘುಪತಿ ಭಟ್

06:01 PM Apr 17, 2021 | Team Udayavani |

ಉಡುಪಿ: ಉಡುಪಿ,ದ.ಕ.ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ ಕಾರಣಕ್ಕಾಗಿ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕು. ರಾಜಕೀಯ ಕಾರ್ಯಕ್ರಮಗಳ ಆವಶ್ಯಕತೆ ಇಲ್ಲ ಎಂದು ಶಾಸಕ ಕೆ.ರಘುಪತಿ ಭಟ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವುದು ಜನಪ್ರಿಯ ಸರಕಾರದ ಲಕ್ಷಣವಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಆ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ, ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದಾರೆ.

ಸರಕಾರ ರಾಜಕೀಯ ಕಾರ್ಯಕ್ರಮಗಳಿಗೆ ನೂರು ಜನ ಭಾಗವಹಿಸುವ ಅವಕಾಶ ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಕಾರ್ಯಕ್ರಮ ಅನಿವಾರ್ಯ ಇಲ್ಲ. ನಮ್ಮ ಜಿಲ್ಲೆಯ ಯಾವುದೇ ಧಾರ್ಮಿಕ ಕಾರ್ಯಗಳಿಗೆ ಅಡ್ಡಿ ಪಡಿಸಬೇಡಿ. ಜನರ ಭಾವನೆಗಳಿಗೆ ಅಡ್ಡಿ ಮಾಡದೆ ತಕ್ಷಣ ಆದೇಶ ವಾಪಸ್ ಪಡೆಯಿರಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಧಾರ್ಮಿಕ ಕೇಂದ್ರಗಳೇ ಹೆಚ್ಚು. ಸಿಎಂ, ಆರೋಗ್ಯ ಸಚಿವ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಪತ್ರ ಬರೆದಿದ್ದೇನೆ. ಕೋಲ, ನೇಮೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳಿಗೆ ಜನ ಕಂಕಣ ಬದ್ಧರಾಗಿದ್ದಾರೆ. ಮುಹೂರ್ತ ನಿಗದಿಯಾಗಿದೆ. ಎಲ್ಲಾ ಸಿದ್ಧತೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ನಾನೊಬ್ಬ ಆಡಳಿತ ಪಕ್ಷದ ಸದಸ್ಯನಾಗಿ ಈ ಮಾತನ್ನು ಹೇಳುತ್ತಿದ್ದೇನೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದಿರುವುದು ಜನಪ್ರಿಯ ಸರಕಾರದ ಲಕ್ಷಣವಲ್ಲ ಎಂದು ಹೇಳಿದರು.

ಇದನ್ನೂ ಓದಿ : ದೆಹಲಿಯಲ್ಲಿ 24 ಗಂಟೆಯಲ್ಲಿ, 24,000 ಪ್ರಕರಣ ಪತ್ತೆ : ಆಕ್ಸಿಜನ್,ಬೆಡ್ ಕೊರತೆ

Advertisement

ಕೋವಿಡ್ ನಿಯಮಾವಳಿಗಳನ್ನು ರೂಪಿಸಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ. ಭಾಗವಹಿಸುವ ಭಕ್ತರ ಸಂಖ್ಯೆಯನ್ನು ನಿಗದಿಪಡಿಸಿ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗೆ ಧಾರ್ಮಿಕ ಕಾರ್ಯಕ್ರಮಗಳು ಅತ್ಯಗತ್ಯ. ಜನಸಂದಣಿ ಗೆ ನಿಯಂತ್ರಣ ಹೇರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ. ಹಿಂದುಳಿದ ಜನಾಂಗದವರೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ದುಡಿಯುತ್ತಾರೆ. ಎರಡು ಮೂರು ತಿಂಗಳು ದುಡಿದು ಒಂದು ವರ್ಷದಿಂದ ಮಾಡುತ್ತಾಾರೆ. ಬಡ ಜನರಿಗೆ ಇದರಿಂದ ಆರ್ಥಿಕ ಹೊಡೆತ ಬೀಳುತ್ತದೆ. ಕರಾವಳಿಯ ಜೀವನಪದ್ಧತಿಯನ್ನು ಅರ್ಥಮಾಡಿಕೊಳ್ಳಿ. ಉಡುಪಿ ನಗರಕ್ಕೆ ನೈಟ್ ಕರ್ಫ್ಯೂನ ಅಗತ್ಯವೂ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌ ನ್ ಪರಿಹಾರ ಅಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next