ಹುಮನಾಬಾದ: ಗಡಿ ಜಿಲ್ಲೆ ಬೀದರನಲ್ಲಿ ಕೂಡ ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಸರ್ಕಾರ ಗಡಿ ಜಿಲ್ಲೆಗಳ ಮಕ್ಕಳ ಹಿತದೃಷ್ಟಿಯಿಂದ ಶಾಲೆ ಮುಚ್ಚುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ 20 ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಭೇಟಿನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಇದೇ ರೀತಿ ಮುಂದೆ ವರೆದರೆ ಹೆಚ್ಚಿನ ಆತಂಕ ಸೃಷ್ಟಿಯಾಗಬಹುದು. ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಜಿಲ್ಲೆ ಮಕ್ಕಳ ಬಗ್ಗೆ ಕಾಳಜಿ ವಹಿಸಿಬೇಕು. ಶಾಲೆಗಳು ಬಂದ್ ಮಾಡುವ ಕುರಿತು ಚಿಂತನೆ ಮಾಡಬೇಕು ಎಂದು ಒತ್ತಾಯಿಸಿದರು.